ಬಂಟ್ವಾಳ: ಕಾರ್ಯಕರ್ತರು ಈಗಿಂದೀಗಲೇ ಪಕ್ಷದ ಸಂಘಟನೆಯನ್ನು ಬಲಪಡಿಸುವ ಮೂಲಕ ಮುಂದಿನ ಚುನಾವಣೆಯಲ್ಲಿ ಬಂಟ್ವಾಳ ಕ್ಷೇತ್ರದಲ್ಲೂ ಬಿಜೆಪಿಯ ಗೆಲುವಿಗೆ ಶ್ರಮಿಸಬೇಕೆಂದು ಮಾಜಿ ಶಾಸಕ ರುಕ್ಮಯ್ಯ ಪೂಜಾರಿ ಕರೆ ನೀಡಿದ್ದಾರೆ. ಬಂಟ್ವಾಳ ಶ್ರೀ ನಿತ್ಯಾನಂದ ಭಜನಾ ಮಂದಿರದಲ್ಲಿ ನಡೆದ ಬಿಜೆಪಿ ಕ್ಷೇತ್ರ ಸಮಿತಿಯ ಕಾರ್ಯಕಾರಿ ಮಂಡಳಿಯ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕ್ಷೇತ್ರ ಸಮಿತಿ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ ಸಭಾಧ್ಯಕ್ಷತೆ ವಹಿಸಿದ್ದರು. ಸಮಾರೋಪ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ರಾಜೇಶ್ ನಾೈಕ್ ಉಳಿಪ್ಪಾಡಿಗುತ್ತು ಆವರು ಮಾತನಾಡಿ ಕೇಂದ್ರ ಸರಕಾರದ ಜನಪರ ಯೋಜನೆಯನ್ನು ಮನೆಮನೆಗೆ ತಲುಪಿಸುವ ಮೂಲಕ ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ವೇದಿಕೆಯಲ್ಲಿ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ,ದೇವದಾಸ್ ಶೆಟ್ಟಿ,ರಾಜ್ಯ ಸಹ ವಕ್ತಾರೆ ಸುಲೋಚನಾ ಜಿ.ಕೆ.ಭಟ್, ಜಿಲ್ಲಾ ಉಪಾಧ್ಯಕ್ಷ ಜಿ.ಆನಂದ, ಜಿಲ್ಲಾ ವಕ್ತಾರರಾದ ಜಿತೇಂದ್ರ ಕೊಟ್ಟಾರಿ, ವಿಕಾಸ್ ಪುತ್ತೂರು, ಮಂಡಲ ಪ್ರಧಾನಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ,ಮೋನಪ್ಪ ದೇವಸ್ಯ,ಮಂಡಲ ಉಪಾಧ್ಯಕ್ಷ ದೇವಪ್ಪ ಪೂಜಾರಿ,ಜಿಲ್ಲಾ ಎಸ್.ಸಿ.ಮೋರ್ಚಾ ಅಧ್ಯಕ್ಷ ದಿನೇಶ್ ಅಮ್ಟೂರು,ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ಪ ಪೂಜಾರಿ ಕಲ್ಲಡ್ಕ,ಜಿಲ್ಲಾ ಪಂಚಾಯತ್ ಸದಸ್ಯರಾದ ತುಂಗಪ್ಪ ಬಂಗೇರ,ರವೀಂದ್ರ ಕಂಬಳಿ,ಕಮಲಾಕ್ಷಿ ಕೆ ಪೂಜಾರಿ ,ಚೆನ್ನಪ್ಪ ಪೂಜಾರಿ, ವೆಂಕಟೇಶ್ ನಾವಡ ಉಪಸ್ಥಿತರಿದ್ದರು.
