ವಿಟ್ಲ :ಉದ್ಯೋಗ ಮತ್ತು ತರಬೇತಿ ನಿರ್ದೇಶನಾಲಯ ಬೆಂಗಳೂರು ರಾಷ್ಟ್ರೀಯ ಸೇವಾ ಯೋಜನೆ ಕೈಗಾರಿಕಾ ತರಬೇತಿ ಸಂಸ್ಥೆ, ತುಂಬೆ ಮತ್ತು ದ ಕ ಜಿ ಪಂ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿಟ್ಲ ಇವುಗಳ ಸಹಯೋಗದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಐ ಟಿ ಐ ವಿದ್ಯಾರ್ಥಿ ನಾಯಕತ್ವ ತರಬೇತಿ ಶಿಬಿರದ `ಸ್ವಚ್ಛ ಭಾರತ ಅಭಿಯಾನ ಮತ್ತು ವಿಜ್ಞಾನ ಮತ್ತು ವೈಜ್ಞಾನಿಕ ಮನೋವೃತ್ತಿಗಾಗಿ ಯುವಜನತೆ’ ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳು 100 ವರ್ಷಕ್ಕೂ ಮಿಕ್ಕಿ ಹಳೆಯದಾಗಿ ಜೀರ್ಣಾವಸ್ಥೆಯಲ್ಲಿದ್ದ ಶಾಲಾ ಕಟ್ಟಡವನ್ನು ಶ್ರಮದಾನದ ಮೂಲಕ ಕೆಡದರು. ಪ್ರಭಾರ ಮುಖ್ಯ ಶಿಕ್ಷಕ ವಿಶ್ವನಾಥ ಗೌಡ ಮತ್ತು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೃಷ್ಣಯ್ಯ ಕೆ ಉಪಸ್ಥಿತರಿದ್ದರು.
