ಬಂಟ್ವಾಳ ತಾಲ್ಲೂಕಿನ ನರಿಕೊಂಬು ಗ್ರಾಮದ ಕೋಡಿಮಜಲು ನಿವಾಸಿ ಶಂಕರನಾರಾಯಣ ಭಟ್ ಎಂಬವರಿಗೆ ವೈದ್ಯಕೀಯ ಚಿಕಿತ್ಸೆಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮಂಜೂರಾದ ರೂ 1.5ಲಕ್ಷ ಮೊತ್ತದ ಪರಿಹಾರಧನ ಚೆಕ್ಕನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಶನಿವಾರ ವಿತರಿಸಿದರು. ಎಪಿಎಂಸಿ ಅಧ್ಯಕ್ಷ ಕೆ.ಪದ್ಮನಾಭ ರೈ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಅಬ್ಬಾಸ್‍ಅಲಿ, ಪುರಸಭೆ ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಕೆಡಿ ceಪಿ ಸದಸ್ಯ ಉಮೇಶ್ ಬೋಳಂತೂರು, ಅಲ್ಫೋನ್ಸ್ ಮಿನೇಜಸ್ ಮತ್ತಿತರರು ಇದ್ದರು.

