ಸುದ್ದಿ9ಮಂಗಳೂರು:ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಅಲ್ಲಲ್ಲಿ ನಿರಂತರವಾಗಿ ಮಹಿಳೆಯರ ಮತ್ತು ವಿದ್ಯಾಥರ್ಿನಿಯರ ಮೇಲೆ ಅತ್ಯಾಚಾರಗಳು ಮತ್ತು ಲೈಂಗಿಕ ದೌರ್ಜನ್ಯಗಳು- ಶಾಲೆ, ರಸ್ತೆ, ಮನೆ, ಕಾರು, ಸಾರ್ವಜನಿಕ ಸ್ಥಳಗಳಲ್ಲಿ ನಡೆಯುತ್ತಿದ್ದು ಈ ಬಗ್ಗೆ ವಿಧಾನಸಭೆಯಲ್ಲಿ ಗಂಭೀರ ಚಚರ್ೆ ನಡೆಯುತ್ತಿದ್ದಾಗ ರಾಜ್ಯದ ಮುಖ್ಯಮಂತ್ರಿಗಳು ನಿದ್ದೆಗೆ ಜಾರಿ, ನಿರಾಸಕ್ತಿ ತೋರುತ್ತಿರುವುದರಿಂದ ಇದು ರಾಜ್ಯ ಸರಕಾರದ ವೈಫಲ್ಯ ಎಂದು ದ.ಕ ಜಿಲ್ಲಾ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಅಧಿಕಾರ ವಹಿಸಿಕೊಂಡ ನಂತರ ಅತ್ಯಾಚಾರ, ಕೊಲೆ, ದರೋಡೆ, ಕಳ್ಳತನ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿಯುತ್ತಿದೆ. ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ಈ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಿದಂತೆ ಕಾಣದೇ ಇರುವುದರಿಂದ ರಾಜ್ಯದ ಜನರ ಹಿತ ದೃಷ್ಟಿಯಿಂದ ಕೇಂದ್ರ ಸರಕಾರ ಮಧ್ಯ ಪ್ರವೇಶಿಸಿ ಜನರ ರಕ್ಷಣೆಗೆ ಮುಂದಾಗಬೇಕು ಎಂದು ಮಾಜಿ ಶಾಸಕ, ಬಿಜೆಪಿ ಜಿಲ್ಲಾ ವಕ್ತಾರಕೆ. ಜಯರಾಮ ಶೆಟ್ಟಿ ಹೇಳಿದ್ದಾರೆ
