ಬಂಟ್ವಾಳ: ಕೆಲ ದಿನಗಳ ಹಿಂದೆಯಷ್ಟೇ ಬಂಟ್ವಾಳ ಕಸ್ಬಾ ಗ್ರಾಮದ ಮಣಿಯಲ್ಲಿ ನೂತನವಾಗಿ ನಿರ್ಮಾಣಗೊಂಡು ಬ್ರಹ್ಮಕಲಶೋತ್ಸವ ನಡೆದ ದುರ್ಗಾ ಮಾತಾ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನೀಡಲ್ಪಟ್ಟ 5 ಲಕ್ಷ ರುಪಾಯಿ ದೇಣಿಗೆಯ ಚೆಕನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಯೋಜನಾಧಿಕಾರಿ ಸುನೀತಾ ನಾಯಕ್ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಸುರೇಶ್ ಪೂಜಾರಿಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಜಿ.ಪಂ.ಸದಸ್ಯ ಪದ್ಮಶೇಖ ಜೈನ್, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಆಡಳಿತ ಮಂಡಳಿ ಉಪಾಧ್ಯಕ್ಷ ಸುರೇಶ್ ಕುಲಾಲ್ ನಾವೂರು, ಅರ್ಚಕ ಬಾಬುಗೌಡ, ಜಯಂತರಾವ್, ಯತೀನ್, ನಿತೀನ್, ಲಕ್ಷ್ಮಣ್ ಕುಲಾಲ್ ಹಾಜರಿದ್ದರು.

