ಬಂಟ್ವಾಳ: ಕರೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅಬ್ದುಲ್ ಜಲೀಲ್ ಹತ್ಯೆಯನ್ನು ಖಂಡಿಸಿ ಹಾಗೂ ಅವರಿಗೆ ಸಂತಾಪ ಸೂಚಿಸಿ ಗ್ರಾಮ ಪಂಚಾಯತ್ ಪ್ರತಿನಿಧಿಗಳ ಒಕ್ಕೂಟದ ವತಿಯಿಂದ ಬಿ.ಸಿ.ರೋಡಿನ ಎಸ್.ಜೆ.ಎಸ್.ವೈ ಸಭಾಂಗಣದಲ್ಲಿ ಸಭೆ ಗುರುವಾರ ನಡೆಯಿತು.
ಈ ಸಂದರ್ಭ ಮಾತನಾಡಿದ ಗ್ರಾಪಂ ಪ್ರತಿನಿಧಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಕೊಳ್ನಾಡು ಸುಭಾಶ್ಚಂದ್ರ ಶೆಟ್ಟಿ, ಜಲೀಲ್ ಅವರ ಹೆಸರನ್ನು ಶಾಶ್ವತವಾಗಿ ಉಳಿಸುವ ಕಾರ್ಯ ನಡೆಯಬೇಕು ಎಂದು ಹೇಳಿದರು.

4bhjaleel
ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ ಮಾತನಾಡಿ, ಜಲೀಲ್ ಹತ್ಯೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅಣಕ ಎಂದರು. ಗ್ರಾಪಂ ಪ್ರತಿನಿಧಿಗಳ ಒಕ್ಕೂಟದ ತಾಲೂಕು ಅಧ್ಯಕ್ಷ ರಾಜೇಶ್ ಬಾಳೇಕಲ್ಲು, ರಾಜ್ಯ ಪ್ರತಿನಿಧಿ ಪುರುಷ ಸಾಲಿಯಾನ್, ಜಿಲ್ಲಾ ಒಕ್ಕೂಟ ಕಾರ್ಯದರ್ಶಿ ಸದಾನಂದ ಪೂಜಾರಿ ಜಲೀಲ್ ಆತ್ಮಕ್ಕೆ ಶಾಂತಿ ಕೋರಿದರು.

By Suddi9

Leave a Reply

Your email address will not be published. Required fields are marked *