ಬಂಟ್ವಾಳ (ವಲಯ ಕಾಂಗ್ರೆಸ್ ಸಮಿತಿ, ಕುಕ್ಕಾಜೆ ನವಯುಗ ಸ್ಪೋಟ್ರ್ಸ್ ಕ್ಲಬ್, ಕರ್ನಾಟಕ ರಾಜ್ಯ ಹಾಗೂ ದ.ಕ. ಜಿಲ್ಲಾ ಅಮೆಚೂರು ಕಬಡ್ಡಿ ಎಸೋಸಿಯೇಶನ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಜನ್ಮ ಶತಾಬ್ಧಿ ಪ್ರಯುಕ್ತ ದಕ್ಷಿಣ ಭಾರತ ಮಟ್ಟದ ಹೊನಲು ಬೆಳಕಿನ ಪ್ರೊ ಕಬಡ್ಡಿ ಪಂದ್ಯಾಟಕ್ಕೆ ಇಲ್ಲಿನ ಶಾಲಾ ಮೈದಾನದಲ್ಲಿ ಶನಿವಾರ ಅದ್ದೂರಿ ಚಾಲನೆ ದೊರೆಯಿತು.
ರಾಜ್ಯ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಶಾಂತಿಯ ಸಂಕೇತವಾಗಿರುವ ಪಾರಿವಾಳಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಜಿ.ಪಂ. ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಗೇರು ನಿಗಮದ ಅಧ್ಯಕ್ಷ ಹಾಜಿ ಬಿ.ಎಚ್. ಖಾದರ್, ಕರ್ನಾಟಕ ಮಾಲಿನ್ಯ ಮಂಡಳಿ ಸದಸ್ಯ ಪಿಯೂಸ್ ಎಲ್. ರೋಡ್ರಿಗಸ್, ತುಳು ಚಿತ್ರನಟ ದೇವದಾಸ ಕಾಪಿಕಾಡ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಉಪಾಧ್ಯಕ್ಷ ಲುಕ್ಮಾನ್ ಬಿ.ಸಿ.ರೋಡು, ಬಂಟ್ವಾಳ ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಬಂಟ್ವಾಳ ಎಪಿಎಂಸಿ ಅಧ್ಯಕ್ಷ ಕೆ. ಪದ್ಮನಾಭ ರೈ, ಬಂಟ್ವಾಳ ಪುರಸಭಾ ಸದಸ್ಯ ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ, ಆರಾಧನಾ ಸಮಿತಿ ಸದಸ್ಯ ಯೂಸುಫ್ ಕರಂದಾಡಿ, ಅಮೆಚೂರು ಕಬಡ್ಡಿ ಎಸೋಸಿಯೇಶನ್ ಕಾರ್ಯಾಧ್ಯಕ್ಷ ಬೇಬಿ ಕುಂದರ್, ಮಂಚಿ ವಲಯ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ರಹಿಮಾನ್, ಮಂಚಿ ಗ್ರಾ.ಪಂ. ಮಾಜಿ ಅಧ್ಯಕ್ಷ ಶ್ರೀಪತಿ ರಾವ್, ಸದಸ್ಯರಾದ ಜಿ.ಎಂ. ಇಬ್ರಾಹಿಂ, ಬದ್ರುದ್ದೀನ್ ಕೈಯೂರು, ಶಮೀವುಲ್ಲಾ, ಬಂಟ್ವಾಳ ತಾ.ಪಂ. ಮಾಜಿ ಸದಸ್ಯ ಡಿ.ಕೆ. ಹಂಝ, ನವಯುಗ ಸ್ಪೋಟ್ರ್ಸ್ ಕ್ಲಬ್ ಅಧ್ಯಕ್ಷ ಪಿ.ಕೆ. ಹಸೈನಾರ್ ಕುಕ್ಕಾಜೆ, ನೆಟ್ಲಮುಡ್ನೂರು ಗ್ರಾ.ಪಂ. ಸದಸ್ಯ ಅಬ್ದುಲ್ ಲತೀಫ್ ನೇರಳಕಟ್ಟೆ, ಬಂಟ್ವಾಳ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಉಪಾಧ್ಯಕ್ಷ ಮಹೇಶ್ ನಾಯಕ್, ಪ್ರಮುಖರಾದ ದಿನೇಶ್ ತಿರುವಾಲೆ, ಸ್ಟೀವನ್ ಡಿ’ಸೋಜ, ಎ.ಬಿ. ಇಬ್ರಾಹಿಂ, ಕರೀಂ ಬೊಳ್ಳಾಯಿ ಮೊದಲಾದವರು ಭಾಗವಹಿಸಿದ್ದರು.
ಕಬಡ್ಡಿ ಸಂಘಟನಾ ಸಮಿತಿಯ ಅಧ್ಯಕ್ಷ, ಜಿ.ಪಂ. ಸದಸ್ಯ ಎಂ.ಎಸ್. ಮುಹಮ್ಮದ್ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ, ಬಂಟ್ವಾಳ ತಾ.ಪಂ. ಉಪಾಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ ವಂದಿಸಿದರು. ಅಬ್ದುಲ್ ಹಮೀದ್ ಗೋಳ್ತಮಜಲು ಹಾಗೂ ನೌಫಲ್ ಕುಡ್ತಮುಗೇರು ಕಾರ್ಯಕ್ರಮ ನಿರೂಪಿಸಿದರು.

