ಬಂಟ್ವಾಳ: ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ ಮತ್ತು 2017-18-19ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆ ಮೇ 28ರಂದು ಬಿ.ಸಿ.ರೋಡು ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಜರಗಲಿದೆ.
ಸಂಘದ ಅಧ್ಯಕ್ಷ ಕೆ. ಸೇಸಪ್ಪ ಕೋಟ್ಯಾನ್ ಅಧ್ಯಕ್ಷತೆ ವಹಿಸುವರು. ಇದೇ ದಿನ ನೂತನ ಕಾರ್ಯಕಾರಿ ಸಮಿತಿಗೆ ಚುನಾವಣೆ ನಡೆಯಲಿದ್ದು ಮೇ 13ರಂದು ನಾಮಪತ್ರ ಸಲ್ಲಿಕೆಗೆ ಕೊನೇ ದಿನವಾಗಿದೆ. ಮೇ 20ರಂದು ನಾಮಪತ್ರ ಹಿಂತೆಗೆಯಬಹುದಾಗಿದೆ. ನ್ಯಾಯವಾದಿ ಚಂದ್ರಶೇಖರ ಪೂಜಾರಿ ಅವರು ಚುನಾವಣಾ ಅಧಿಕಾರಿಯಾಗಿ ಭಾಗವಹಿಸಲಿರುವರು ಎಂದು ಸಂಘದ ಪ್ರ. ಕಾರ್ಯದರ್ಶಿ ಬೇಬಿ ಕುಂದರ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
