ಬಂಟ್ವಾಳ: ತಾಲ್ಲೂಕಿನ ಮಾರ್ನಬೈಲ್ ಗಾಂಧಿನಗರದಿಂದ ಪಂಚಾಯಿತಿ ಕಚೇರಿ ತನಕ ಉದ್ಯೋಗ ಖಾತರಿ ಯೋಜನೆಯಡಿ ರೂ 10ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರಿಟೀಕೃತ ರಸ್ತೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಬುಧವಾರ ಉದ್ಘಾಟಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ , ಎಂ.ಎಸ್.ಮಹಮ್ಮದ್, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಅಬ್ಬಾಸ್ ಆಲಿ, ಸದಸ್ಯ ಕೆ.ಸಂಜೀವ ಪೂಜಾರಿ, ಯೂಸುಫ್ ಕರಂದಾಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಶರೀಫ್ ನಂದಾವರ , ಉಪಾಧ್ಯಕ್ಷೆ ನಳಿನಿ ಮತ್ತಿತರರು ಇದ್ದರು. 
