ಬಂಟ್ವಾಳ: ಬಂಟ್ವಾಳ ಪೇಟೆ ರಸ್ತೆ ಅಗಲೀಕರಣ ಮಾಡುವಂತೆ ಆಗ್ರಹಿಸಿ ಬಂಟ್ವಾಳ ವರ್ತಕರು ಹಾಗೂ ರಿಕ್ಷಾ ಚಾಲಕರು ಹಾಗೂ ಮಾಲಕರ ಸಂಘದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈಯವರನ್ನು ಶನಿವಾರ ಬಡ್ಡಕಟ್ಟೆಯಲ್ಲಿ ಭೇಟಿ ಮಾಡಿದ ಅವರು ಸಚಿವರಿಗೆ ಮನವಿ ಸಲ್ಲಿಸಿ ರಸ್ತೆ ಅಗಲೀಕರಣದ ಅವಶ್ಯಕತೆಯನ್ನು ಸಚಿವರಿಗೆ ಮನದಟ್ಟು ಮಾಡಿದರು.BTW_MAY28_5

ಮನವಿಗೆ ಸ್ಪಂದಿಸಿದ ಸಚಿವರು ನಾನು ರಸ್ತೆ ಅಗಲೀಕರಣದ ವಿರೋಧಿಯಲ್ಲ, ಈ ಬಗ್ಗೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗೆ ಸೂಚಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭ ವಿಶ್ವನಾಥ ಚೆಂಡ್ತಿಮಾರ್, ಪುರಸಭಾ ಸದಸ್ಯ ಪ್ರವೀಣ್ ಬಿ., ಜನಾರ್ದನ ಚೆಂಡ್ತಿಮಾರ್ ಮತ್ತಿತರರು ಹಾಜರಿದ್ದರು.

By Suddi9

Leave a Reply

Your email address will not be published. Required fields are marked *