ಬಂಟ್ವಾಳ: ಕರ್ನಾಟಕ ಸರಕಾರದ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯಿ ಇಲಾಖೆಯು ವಿಶೇಷ ಘಟಕ ಯೋಜನೆಯಲ್ಲಿ ನರಿಕೊಂಬು ಗ್ರಾಮದ ನಿನ್ನಿಪಡ್ಪು ಶ್ರೀ ನಾಗಬ್ರಹ್ಮ ಆದಿಮೊಗೇರ್ಕಳ ಸೇವಾ ಸಮಿತಿ, ಬಿಡುಗಡೆ ಮಾಡಿದ ರೂ.1,25,000 ಮೊತ್ತದ ಚೆಕ್ಕನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಯವರು ಸಮಿತಿಯ ಕಾರ್ಯದರ್ಶಿ ಮೋನಪ್ಪ ನಿನ್ನಿಪಡ್ಪು ಅವರಿಗೆ ಹಸ್ತಾಂತರಿಸಿದರು.Narikummbu

ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಬಂಟ್ವಾಳ ಕೆ.ಡಿ.ಪಿ ಸದಸ್ಯ ಉಮೇಶ್ ಬೋಳಂತೂರು, ಬಂಟ್ವಾಳ ಆರಾಧನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಪೂಜಾರಿ, ಬಂಟ್ವಾಳ ಭೂಬ್ಯಾಂಕ್ ಅಧ್ಯಕ್ಷ ಸುದರ್ಶನ್ ಜೈನ್, ಕೃಷ್ಣಪ್ಪ ಪೂಜಾರಿ ನಾಟಿ, ಚಂದ್ರಹಾಸ ಶಂಕರಕೋಡಿ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *