ಬಂಟ್ವಾಳ : ಕಂದಾಯ ಇಲಾಖೆಯಲ್ಲಿ ಉಪತಹಶೀಲ್ದಾರ್ ರಾಗಿ ಸೇವೆ ಸಲ್ಲಿಸಿದ ಭಾಸ್ಕರ್ ರಾವ್ ರವರ ಬೀಳ್ಕೊಡುಗೆ ಸಮಾರಂಭವು ತಾ.ಪಂ. ನ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ಜರಗಿತು.
ಅಧಿಕಾರಿಗಳು ಜನಸ್ನೇಹಿಯಾದರೆ ಮಾತ್ರ ಜನಮನದಲ್ಲಿ ಶಾಶ್ವತವಾಗಿ ಉಳಿಯುತ್ತಾರೆ. ಈ ಮಾತಿಗೆ ಭಾಸ್ಕರ್ ರಾವ್ ರವರ ಸೇವೆ ಉತ್ತಮ ನಿದ ರ್ಶನ. ಸರಳ ಸಜ್ಜನಿಕೆಯ ವ್ಯಕ್ತಿತ್ವದ ಭಾಸ್ಕರ್ ರಾವ್ ಕ್ರಿಯಾಶೀಲ ಅಧಿಕಾರಿ ಎಂದು ತಹಶೀಲ್ದಾರ್ ಪುರಂಧರ ಹೆಗ್ಡೆ ಸಮಾರಂಭದ ಅಧ್ಯಕ್ಷತೆ ವಹಿಸಿ ಸನ್ಮಾನಿಸಿ ಮಾತನಾಡಿದರು.KAR_5960

KAR_5962ವೇದಿಕೆಯಲ್ಲಿ ಉಪತಹಶೀಲ್ದಾರ್ ಪರಮೇಶ್ವರ ನಾಯಕ್, ಆಹಾರ ಶಾಖೆಯ ಶ್ರೀನಿವಾಸ್, ತಾಲೂಕು ಆಡಳಿತ ಶಾಖೆಯ ಸೀತಾರಾಮ ಕಮ್ಮಾಜೆ ಹಾಗೂ ತಾಲೂಕು ಕಚೇರಿ ಸಿಬ್ಬಂದಿಗಳು , ಗ್ರಾಮಕರಣಿಕರು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ಗ್ರಾಮ ಕರಣಿಕರ ಸಂಘದ ಅಧ್ಯಕ್ಷ ಜನಾರ್ಧನ್ ವಂದಿಸಿದರು. ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *