ಬಂಟ್ವಾಳ : ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ದ.ಕ.ಮತ್ತು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ , ಕಾರ್ಮಿಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾ.ಪಂ., ಕಂದಾಯ ಇಲಾಖೆ ಇದರ ಸಂಯುಕ್ತ ಆಶ್ರಯದಲ್ಲಿ ನ್ಯಾಯಾಲಯದ ಆವರಣದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಚಂದ್ರಶೇಖರ ಯು. ಸಂಚಾರಿ ಸಾಕ್ಷರತಾ ರಥಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀ ಶರಾದ ಪ್ರಕಾಶ್.ಸಿ.ಡಿ, ಸಹಾಯಕ ಸರಕಾರಿ ಅಭಿಯೋಜಕ ಎಂ.ಎಸ್.ಆಲಿ, ವಕೀಲರ ಸಂಘದ ಅಧ್ಯಕ್ಷ ವೆಂಕಟ್ರಮಣ ಶೆಣೈ , ಪ್ರಧಾನ ಕಾರ್ಯದರ್ಶಿ ರಾಜಾರಾಮ ನಾಯಕ್, ಶಿಶು ಅಭಿವೃದ್ಧಿ ಇಲಾಖೆಯ ಮಲ್ಲಿಕಾ , ಸುಧಾ ಜೋಶಿ, ನ್ಯಾಯವಾದಿಗಳು ಮತ್ತು ನ್ಯಾಯಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.

