ಬಂಟ್ವಾಳ ತಾಲೂಕಿನ ಬೆಂಜನಪದವು ಕರಾವಳಿ ಕಾಲೇಜ್ ಬಳಿ ರಿಕ್ಷಾ ಚಾಲಕನನ್ನು ಮುಸುಕುದಾರಿಗಳ ತಂಡವೊಂದು ಬರ್ಬರವಾಗಿ ಹತ್ಯೆಗೈದ ಘಟನೆ ಬುಧವಾರ ನಡೆದಿದೆ.ಪೊಳಲಿ ಸಮೀಪದ ಅಮ್ಮುಂಜೆ ನಿವಾಸಿ ಅಶ್ರಫ್ (30) ಕೊಲೆಯಾದವ .ಬೈಕಿನಲ್ಲಿ ಬಂದ ಮುಸುಕುಧಾರಿಗಳು ಈ ಕೃತ್ಯ ನಡೆಸಿ ಪರಾರಿಯಾಗಿದ್ದಾರೆ.
ಎರಡು ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಎಂದು ಅಶ್ರಫ್ ನನ್ನು ದುಷ್ಕರ್ಮಿಗಳು ಆಟೋ ತಡೆದು ಕಡಿದು ಕೊಲೆಗೈದಿದ್ದಾರೆಎಂದು ಸಂಶಯ ದಿಂದ ಪೂರ್ವ ದ್ವೇಷದಿಂದಲೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈತ ಎರಡು ಕೊಲೆ ಪ್ರಕರಣದಲ್ಲಿ ಬಾಗಿಯಾಗಿದ್ದಾನೆ ಎಂದು ಸ್ಥಳಿಯರು ಅಭಿಪ್ರಾಯ ಕೇಳಿ ಬರುತ್ತಿತ್ತು. ಸ್ಥಳದಲ್ಲಿ ಅತಂಕದ ವಾತಾವರಣ ಉಂಟಾಗಿದ್ದು ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಘಟನೆಯ ಹಿನ್ನಲೆಯಲ್ಲಿ ಕಲ್ಲಡ್ಕ ಪರಿಸರದಲ್ಲಿ ಕೆಲ ಅಂಗಡಿ ಮುಂಗಟ್ಟಗಳು ಸ್ವಯಂಪ್ರೇರಿತವಾಗಿ ಮುಚ್ಚುತ್ತಿದ್ದರೆ,ಕೆಲವು ಅಂಗಡಿಗಳನ್ನು ಪೊಲೀಸರು ಬಲವಂತವಾಗಿ ಮುಚ್ಚಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
