ಬಂಟ್ವಾಳ: ಯೋಗದಿಮದ ದೇಹ ಮತ್ತು ಮನಸ್ಸನ್ನು ಹತೋಟಿಗೆ ತರಬಹುದಾಗಿದೆ. ಎಲ್ಲರೂ ಸಕ್ರಿಯವಾಗಿ ಯೋಗದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಶಿಕ್ಷಕ ಐತಪ್ಪ ಸೇನವ ಹೇಳಿದರು.
ಅವರು ಶ್ರೀರಾಮಚಂದ್ರ ಪದವಿಪೂರ್ವ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಮುಖ್ಯ ಅತಿಥಿಯಾಗಿ ಪ್ರಾಂಶುಪಾಲ ಶೇಖರ್ ರೈ ಭಾಗವಹಿಸಿದ್ದರು. ಯೋಗ ಶಿಕ್ಷಕ ಚೆನ್ನಕೇಶವ ಡಿ.ಆರ್. ಮಾರ್ಗಧರ್ಸನದಲಲಿ ವಿವಿಧ ಯೋಗಾಸನಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು. ಸುಧಾಕರ ರೈ ಸ್ವಾಗತಿಸಿ, ದೈಹಿಕ ಶಿಕ್ಷಕ ಸತ್ಯನಾರಾಯಣ ರೈ ವಂದಿಸಿದರು. ಶಿವರಾಮ ಭಟ್ ಹೆಚ್. ಕಾರ್ಯಕ್ರಮ ನಿರೂಪಿಸಿದರು.
