ಬಂಟ್ವಾಳ: ಹೊಂಡ-ಗುಂಡಿಗಳಿಂದ ಆವೃತವಾಗಿ,ಸಂಪೂರ್ಣ ಹದಗೆಟ್ಟಿರುವ ಬಿ.ಸಿ.ರೋಡ್ ಸರ್ವಿಸ್ ರಸ್ತೆಯನ್ನು ದುರಸ್ತಿ ಮಾಡುವಂತೆ ಆಗ್ರಹಿಸಿ ಬಿ.ಸಿ.ರೋಡ್ ರಿಕ್ಷಾ ಚಾಲಕ-ಮಾಲಕರು ಭಿಕ್ಷೆ ಬೇಡಿ ಹಣ ಸಂಗ್ರಹಿಸುವ ಮೂಲಕ ವಿನೂತನ ರೀತಿಯಲ್ಲಿ ಧರಣಿ ನಡೆಸಿದರು.

8ವರ್ಷಗಳಿಂದ ಈ ರಸ್ತೆ ಹದಗೆಟ್ಟಿದ್ದು,ಸಂಬಂಧಪಟ್ಟವರಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ.ಈ ಹಿನ್ನೆಲೆಯಲ್ಲಿ ಸಂಸದರು,ಜಿಲ್ಲಾಡಳಿತ ,ರಾಷ್ಟ್ರೀಯ ಹೆದ್ಧಾರಿ ಪ್ರಾಧಿಕಾರಕ್ಕೆ ಬಿಸಿ ಮುಟ್ಟಿಸುವ ಸಲುವಾಗಿ ಭಿಕ್ಷೆ ಬೇಡಿ ಹಣ ಸಂಗ್ರಹಿಸುವ ಮೂಲಕ ಧರಣಿ ನಡೆಸಲಾಯಿತು.
ಈ ಸಂದರ್ಭ ಬಿ.ಸಿ.ರೋಡಿನ ರಿಕ್ಷಾ ಚಾಲಕ-ಮಾಲಕರ ಸಂಘದ ಅಧ್ಯಕ್ಷ ವಸಂತ ಕುಮಾರ್ ಮಣಿಹಳ್ಳ, ಕಾರ್ಯದರ್ಶಿ ಚಂದ್ರಶೇಖರ್, ಟೆಂಪೋ ಚಾಲಕರ ಸಂಘದ ಅದ್ಯಕ್ಷ ಕೃಷ್ಣ ಅಲ್ಲಿಪಾದೆ, ಕಾರ್ಯದರ್ಶಿ ನಾರಾಯಣ, ಗೌರವಾಧ್ಯಕ್ಷ ಸದಾನಂದ ನಾವೂರು ಮತ್ತಿತರರು ಉಪಸ್ಥಿತರಿದ್ದರು.
