ಬಂಟ್ವಾಳ: ಇಕ್ಕಟ್ಟಾದ ರಸ್ತೆಯಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿರುವ ಬಂಟ್ವಾಳ ಪೇಟೆಯಲ್ಲಿ ರಸ್ತೆ ಅಗಲೀಕರಣ ಕಾರ್ಯ ಕೈಗೊಳ್ಳುವಂತೆ ಆಗ್ರಹಿಸಿ ಬಂಟ್ವಾಳ ರಿಕ್ಷಾ ಚಾಲಕರು ಹಾಗೂ ವರ್ತಕರು ವಿಶ್ವನಾಥ ಚೆಂಡ್ತಿಮಾರ್ ಅವರ ನೇತೃತ್ವದಲ್ಲಿ ಶನಿವಾರ ಜಿಲ್ಲಾಧಿಕಾರಿ ಡಾ. ಜಗದೀಶ್ ಅವರಿಗೆ ಮನವಿ ಸಲ್ಲಿಸಿದರು.BTW_JULY1_7

ಬ್ರಹ್ಮರಕೂಟ್ಲುವಿನ ಬಂಟ ಸಮುಧಾಯ ಭವನದಲ್ಲಿ ನಡೆದ ಸಾರ್ವಜನಿಕ ಶಾಂತಿ ಸಭೆಯಲ್ಲಿ ಪಾಲ್ಗೊಳ್ಳಲು ಜಿಲ್ಲಾಧಿಕಾರಿ ಬಂದಿದ್ದ ವೇಳೆ ಅವರನ್ನು ಭೇಟಿ ಮಾಡಿದ ರಿಕ್ಷಾ ಚಾಲಕರು ಹಾಗೂ ವ್ಯಾಪರೀಗಳು ಬಂಟ್ವಾಳ ಪೇಟೆ ರಸ್ತೆ ಅಗಲೀಕರಣದ ಅನಿವಾರ್ಯತೆಯ ಬಗ್ಗೆ ಜಿಲ್ಲಾಧಿಕಾರಿಗೆ ಮನವರಿಕೆ ಮಾಡಿದರು. ಮನವಿಯನ್ನು ಸ್ವೀಕರಿಸಿದ ಜಿಲ್ಲಾಧಿಕಾರಿ ಪೂರಕವಾಗಿ ಸ್ಪಂದಿಸಿರುವುದಾಗಿ ತಿಳಿದು ಬಂದಿದೆ.

By suddi9

Leave a Reply

Your email address will not be published. Required fields are marked *