ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗೆ (ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ) ಸಂಬಂಧಿಸಿದಂತೆ ಬಂಟ್ವಾಳ, ಸುಳ್ಯ, ಪತ್ತೂರು ಮತ್ತು ಬೆಳ್ತಂಗಡಿ ತಾಲೂಕಿನಾದ್ಯಂತ ಜುಲೈ 04 ರ ಮಧ್ಯರಾತ್ರಿ 12 ಗಂಟೆಯಿಂದ ಜುಲೈ 11 ರ ಮಧ್ಯರಾತ್ರಿ 12 ಗಂಟೆಯವರೆಗೆ ಸೆಕ್ಷನ್ 144 ರ ಅನ್ವಯ ನಿಷೇಧಾಜ್ಞೆಯನ್ನು ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ಆದೇಶ ಹೊರಡಿಸಿದ್ದಾರೆ.
ಮೇ 27ರಿಂದ ಜೂನ್ 2, ಜೂನ್ 3ರಿಂದ ಜೂನ್ 9, ಜೂನ್ 10ರಿಂದ ಜೂನ್ 16, ಜೂನ್ 17ರಿಂದ ಜೂನ್ 23, ಜೂನ್ 23ರಿಂದ ಜೂನ್ 29ವರೆಗೆ ನಿಷೇಧಾಜ್ಞೆ ವಿಧಿಸಲಾಯಿತು. ಬಳಿಕ ಜುಲೈ 4ವರೆಗೆ ವಿಸ್ತರಣೆಗೊಂಡ ನಿಷೇಧಾಜ್ಞೆಯನ್ನೀಗ ಏಳನೇ ಬಾರಿ ವಿಸ್ತರಿಸಿದಂತಾಗಿದೆ.
ಕಲ್ಲಡ್ಕ, ಬಿ.ಸಿ.ರೋಡ್, ಕೈಕಂಬ, ವಿಟ್ಲ ಕನ್ಯಾನ, ಮೆಲ್ಕಾರ್, ಮಾಣಿ, ಫರಂಗಿಪೇಟೆ, ಬಂಟ್ವಾಳ ಪೇಟೆ ಸಹಿತ ತಾಲೂಕಿನ ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದ್ದು, ಗಸ್ತು ತಿರುಗುತ್ತಿದ್ದಾರೆ.
