ಮಂಗಳೂರು : ಪೆಟ್ರೋಲ್ ಕೇಳುವ ನೆಪದಲ್ಲಿ ಯುವಕರಿಬ್ಬರ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ಅಡ್ಯಾರ್ ಪದವಿನಲ್ಲಿ ನಡೆದಿದೆ.
ಕೇರಳದ ಮಲಪ್ಪುರಂ ನಿವಾಸಿ, ಮಂಗಳೂರಿನ ಖಾಸಗಿ ಕಾಲೇಜೊಂದರ 3ನೆ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಸಾಜಿದ್ (23) ಹಾಗೂ ಆತನ ಸ್ನೇಹಿತನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

IMG-20170707-WA0066

ಸಾಜಿದ್ ಮತ್ತು ಆತನ ಸ್ನೇಹಿತ ನೌಫಲ್ ಅಡ್ಯಾರ್ ಪದವಿನಿಂದ ಬಿತ್ತುಪಾದೆಗೆ ತೆರಳುತ್ತಿದ್ದರು. ಈ ಸಂದರ್ಭ ಅಡ್ಯಾರ್ ಪದವಿನಲ್ಲಿ ಬೈಕ್ ನಲ್ಲಿ ನಿಲ್ಲಿಸಿದ ಮೂವರ ತಂಡ “ಪೆಟ್ರೋಲ್ ಖಾಲಿಯಾಗಿದೆ. ಪೆಟ್ರೋಲ್ ಇದ್ದರೆ ನೀಡಿ” ಎಂದಿದೆ. ಸಾಜಿದ್ ಹಾಗೂ ನೌಫಲ್ ಪೆಟ್ರೋಲ್ ನೀಡಲು ಮುಂದಾಗುತ್ತಿದ್ದಂತೆ ಇವರ ಮೇಲೆ ದಾಳಿ ನಡೆದಿದೆ. ಘಟನೆಯಿಂದ ಸಾಜಿದ್ ನ ಕೈ ಹಾಗೂ ಹೊಟ್ಟೆಯ ಬಲಭಾಗಕ್ಕೆ ತೀವ್ರ ಗಾಯವಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ದೌಡಾಯಿಸಿ ಬಿಗು ಬಂದೋಬಸ್ತು ಏರ್ಪಡಿಸಿದ್ದಾರೆ.ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಡ್ಯಾರ್ ಗಾರ್ಡನ್ ನಲ್ಲಿ ಕಾಂಗ್ರಸ್ ಸಮಾ ೇಶದಲ್ಲಿ ಭಾಗವಹಿಸಿದ್ದು, ಅದಾಗಲೇ ಈಕ್ರತ್ಯ ನಡೆದಿದೆ

By suddi9

Leave a Reply

Your email address will not be published. Required fields are marked *