ಬಂಟ್ವಾಳ ತಾಲೂಕಿನ ಅಲ್ಲಲಿ ನಡೆಯುತ್ತಿರುವ ಕೋಮು ಗಲಭೆಗಳನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಪೊಲೀಸರು ಕಾರ್ಯಪ್ರವೃತ್ತರಾಗಿದ್ದು ಅಲ್ಲಲ್ಲಿ ನಾಕಾಬಂಧಿ ನಡೆಸುತ್ತಿರುವ ಬಗ್ಗೆ ವರದಿಯಾಗಿದೆ.ಕೋಮುಸೂಕ್ಷ್ಮ ಪ್ರದೇಶದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು ಸಾರ್ವಜನಿಕ ಜನಜೀವನ ಸಾಂಗವಾಗಿ ನಡೆಯಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡು ನಿಟ್ಟಿನಲ್ಲಿ ಪೊಲೀಸರು ಬಹಳ ಶ್ರಮ ವಹಿಸುತ್ತಿರುವುದು ತಿಳಿದು ಬಂದಿದೆ.
ಪೊಳಲಿ ಪರಿಸರದಲ್ಲಿ ಪೊಲೀಸರು ಪ್ರತಿಯೊಂದು ವಾಹನದ ತಪಾಸಣೆ ನಡೆಸುತ್ತಿದ್ದುದ್ದು ಕಂಡುಬಂತು.
