ಬಂಟ್ವಾಳ ; ಶರತ್ ಸಾವಿನಿಂದ ಯಾರೂ ಧೃತಿಗೆಡಬೇಡಿ, ನಿಮ್ಮ ಜೊತೆ ನಾವಿದ್ದೇವೆ ಎಂದು ಕೇಂದ್ರ ದ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವ ಡಿ.ವಿ.ಸದಾನಂದ ಗೌಡ ಬಿಜೆಪಿ ಕಾರ್ಯಕರ್ತರಿಗೆ ಧೈರ್ಯ ತುಂಬಿದ್ದಾರೆ ಮಂಗಳವಾರ ಬೆಳಿಗ್ಗೆ ಬಿ.ಸಿ.ರೋಡಿನಲ್ಲಿರುವ ಬಿಜೆಪಿ ಕಛೇರಿಗೆ ಭೇಟಿ ನೀಡಿದ ಅವರು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಕಾಂಗ್ರೇಸ್ ಸರ್ಕಾರದ ದುರಾಡಳಿತದಿಂದಾಗಿ ಜಿಲ್ಲೆಯಲ್ಲಿ ಈ ರೀತಿಯ ಅಹಿತಕರ ಘಟನೆಗಳು ಮರುಕಳಿಸುತ್ತಿದೆ. ಮುಂದಿನ ಚುನಾವಣೆಯಲ್ಲಿ ಭಾತೀಯ ಜನಾತಾ ಪಾರ್ಟಿ ಅಧಿಕಾರಕ್ಕೆ ಬರುತ್ತದೆ ಎನ್ನುವ ಭಯದಿಂದ ಕಾರ್ಯಕರ್ತರಲ್ಲಿ ಭಯಮೂಡಿಸುವ ಕಾರ್ಯವನ್ನು ಕಾಂಗ್ರೇಸ್ ಸರ್ಕಾರ ನಡೆಸುತ್ತಿದೆ ಎಂದರು. ಹಿಂಸಾಚಾರದಲ್ಲಿ ಕರ್ನಾಟಕ ಕೇರಳದ ಕೊಲೆ ರಾಜಕಾರಣವನ್ನು ಮೀರಿಸಿ ಒಂದು ಹೆಜ್ಜೆ ಮುಂದೆ ಹೋಗುತ್ತಿರುವುದು ದುರದೃಷ್ಟಕರ ಎಂದವರು ಕಳವಳ ವ್ಯಕ್ತಪಡಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ವಿಧಾನಸಭೆಯ ಪ್ರತಿಪಕ್ಷದ ಮುಖ್ಯ ಸಚೇತಕ ವಿ ಸುನೀಲ್ ಕುಮಾರ್, ವಿಧಾನ ಪರಿಷತ್‍ನ ಪ್ರತಿಪಕ್ಷ ಮುಖ್ಯಸಚೇತಕ ಕ್ಯಾ.ಗಣೇಶ್ ಕಾರ್ಣಿಕ್ , ದ.ಕ ಜಿಲ್ಲಾ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಮಾಜಿ ಶಾಸಕರಾದ ಎನ್.ಯೋಗೀಶ್ ಭಟ್, ಕೆ.ಮೊನಪ್ಪ ಭಂಡಾರಿ, ಎ.ರುಕ್ಮಯ ಪೂಜಾರಿ , ಜಿಲ್ಲಾ ಸಮಿತಿ ಸದಸ್ಯರಾದ ಅಶೋಕ್ ಕುಮಾರ್ ರೈ , ಬಿಜೆಪಿ ಮುಖಂಡರಾದ ರಾಜೇಶ್ ನಾೈಕ್ ಉಳಿಪ್ಪಾಡಿ, ಕ್ಷೇತ್ರದ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಕ್ಷೇತ್ರ ಪ್ರಧಾನಕಾರ್ಯದರ್ಶಿ ರಾಮದಾಸ್ ಬಂಟ್ವಾಳ. ಮೋನಪ್ಪ ದೇವಸ್ಯ, ಕ್ಷೇತ್ರ ಕಾರ್ಯದರ್ಶಿಗಳಾದ ರಮನಾಥ ರಾಯಿ, ಸೀತಾರಾಮ ಪೂಜಾರಿ, ದಿನೇಶ್ ಭಂಡಾರಿ, ಎ ಗೋವಿಂದ ಪ್ರಭು, ಕೃಷ್ಣಪ್ಪ ಪೂಜಾರಿ, ದೇವಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
