ಫರಂಗಿಪೇಟೆ: ಕೇಂದ್ರಸರಕಾರದ ಯೋಜನೆಗಳಿರಲಿ ಅಥವಾ ರಾಜ್ಯದ ಅನುದಾನಗಳಿರಲಿ ,ರಾಜ್ಯ ಸರಕಾರ ಹಾಗೂ ಸ್ಥಳೀಯ ಕಾಂಗ್ರೆಸ್ ಶಾಸಕರು ಉದ್ದೇಶ ಪೂರ್ವಕವಾಗಿ ತಾರತಮ್ಯ ಮಾಡುತ್ತದೆ.ಅಲ್ಲದೆ ಕೇಂದ್ರ ಸರಕಾರದ ಯೋಜನೆಗಳನ್ನು ತಮ್ಮದೆಂದು ಬಿಂಬಿಸಿ ದಿಕ್ಕು ತಪ್ಪಿಸುತ್ತಿದೆ ಎಂದು ದ.ಕ.ಜಿಲ್ಲಾ ಪಂವಾಯತ್ ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ ಅವರು ಮೇರಮಜಲು ಗ್ರಾಮದ ತೇವುಕಾಡು ಶ್ರೀ ವ್ಯಾಘ್ರೇಶ್ವರಿ ಭಜನಾ ಮಂದಿರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.WhatsApp Image 2017-07-23 at 8.58.23 PM

ಇವರು ಕಳೆದ 15 ದಿನಗಳಿಂದ ಮೇರಮಜಲು ಗ್ರಾಮ ವ್ಯಾಪ್ತಿಯಲ್ಲಿ ಬಿಜೆಪಿ ವಿಸ್ತಾರಕರಾಗಿ ಮನೆಮನೆಗಳಿಗೆ ಕೇಂದ್ರ ಸರಕಾರದ ಯೋಜನೆಗಳು ,ಮತ್ತು ಸಾಧನೆಯ ಬಗ್ಗೆ ಪ್ರಚಾರ ಮಾಡುತ್ತಿದ್ದಾರೆ.ಈ ಕಾರ್ಯಕರ್ತರ ಸಭೆಯ ಅಧ್ಯಕ್ಷತೆಯನ್ನು ಮಂಗಳೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್‍  ವಹಿಸಿ ದ್ದರು. ವೇದಿಕೆಯಲ್ಲಿ ಸುಳ್ಯ ತಾಲೂಕು ಪಂಚಾಯತ್ ಉಪಾಧ್ಯಕ್ಷೆ  ಶುಭದಾ ಶೆಟ್ಟಿ ,ಮಂಗಳೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮನೋಜ್ ಆಚಾರ್ಯ ನಾಣ್ಯ , ಉಪಾಧ್ಯಕ್ಷರುಗಳಾದ  ಪ್ರವೀಣ್ ಕುಮಾರ್ ಶೆಟ್ಟಿ ಸುಜೀರು, ಜಯಶ್ರೀ ಕರ್ಕೇರಾ , ಪುದು ಶಕ್ತಿ ಕೇಂದ್ರದ ಅಧ್ಯಕ್ಷ ಪವನ್ ,ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ ಕೊಟ್ಟಿಂಜ , ತಾಲೂಕು ಪಂಚಾಯತ್ ಸದಸ್ಯ ಗಣೇಶ್ ಸುವರ್ಣ ,ಹಿರಿಯ ಕಾರ್ಯಕರ್ತರಾದ ಗಂಗಾಧರ ಕೋಟ್ಯಾನ್ ,ಜನಾರ್ಧನ, ಜಯರಾಮ ಶೆಟ್ಟಿ ಅಬ್ಬೆಟ್ಟು , ವಿಶು ಕುಮಾರ್ ಅಬ್ಬೆಟ್ಟು,ಸುರೇಶ್ ಶೆಟ್ಟಿ ತೇವುಕಾಡು, ಗ್ರಾಮ ಪಂಚಾಯತ್ ಸದಸ್ಯರಾದ ರವಿ ಕೋಟ್ಯಾನ್ ಅಬ್ಬೆಟ್ಟು, ಗೀತಾ ಧರ್ಮರಾಜ್ ,ಅರುಣಾ ತೇವುಕಾಡು ಮತ್ತಿತರರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *