ಬಂಟ್ವಾಳ :ತಾಲೂಕಿನಾದ್ಯಂತ ಜುಲೈ 26 ರ ಬೆಳಿಗ್ಗೆ 9 ಗಂಟೆಯಿಂದ ಜುಲೈ 28 ಮಧ್ಯರಾತ್ರಿ 12 ಗಂಟೆವರೆಗೆ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 35ರ ಅನ್ವಯ ನಿರ್ಬಂಧಕಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಡಾ. ಕೆ.ಜಿ. ಜಗದೀಶ ಆದೇಶ ಹೊರಡಿಸಿದ್ದಾರೆ. ಬಂಟ್ವಾಳ ತಾಲೂಕಿನಾದ್ಯಂತ ಈ ಅವಧಿಯಲ್ಲಿ ದೈಹಿಕ ಹಿಂಸೆಯನ್ನುಂಟು ಮಾಡುವ ವಸ್ತುಗಳನ್ನು ಹಾಗೂ ಸ್ಫೋಟಕಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ. ವ್ಯಕ್ತಿಗಳ ಅಥವಾ ಅವರ ಶವಗಳ ಪ್ರತಿಕೃತಿಗಳ ಪ್ರದರ್ಶನ, ಸಾರ್ವಜನಿಕ ಸುವ್ಯವಸ್ಥೆಗೆ ಬಾಧೆಯನ್ನುಂಟುಮಾಡುವ ಘೋಷಣೆ ಹಾಗೂ ಭಾಷಣ ಮಾಡುವುದು, ಭಿತ್ತಿಪತ್ರಗಳನ್ನು ಪ್ರದರ್ಶಿಸುವುದು ಅಥವಾ ಪ್ರಸಾರ ಮಾಡುವುದು, ಬಹಿರಂಗ ಸಭೆ, ಮೆರವಣಿಗೆ ನಡೆಸುವುದನ್ನು ನಿಷೇಧಿಸಲಾಗಿದೆ.ಜು.೨೬ರ ವರೆಗೆ ತಾಲೂಕಿನಲ್ಲಿ ಸೆ.೧೪೪ನಿಷೇದಾಜ್ಙೆಯನ್ನು ಜಾರಿಗೊಳಿಸಲಾಗಿತ್ತು.ಬುಧವಾರ ನಿಷೇದಾಜ್ಙೆಯನ್ನು ತೆರವುಗೊಳಿಸಿ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ ೩೫ ರ ರನ್ವಯ ನಿರ್ಬಂಧಕಾಜ್ನೆಯನ್ನು ಜಾರಿಗೊಳಿಸಲಾಗಿದೆ. ಮುಂಜಾಗ್ರತಾಕ್ರಮವಾಗಿ ಪೊಲೀಸ್ ಬಂದೋಬಸ್ತ್ ಮುಂದುವರಿದಿದೆ.

By suddi9

Leave a Reply

Your email address will not be published. Required fields are marked *