ಮಂಗಳೂರು: ಮೂಡಬಿದಿರೆಯ ಖಾಸಗೀ ಕಾಲೇಜಿನ ಹಾಸ್ಟೆಲ್ನಲಿ ಅಸಹಜವಾಗಿ ಸಾವನ್ನಪ್ಪಿದ ಕಾವ್ಯಾಳ ಸಾವಿಗೆ ನ್ಯಾಯ ದೊರಕಿಸಿಕೊಡಲು ಎಲ್ಲಾ ವಿದ್ಯಾರ್ಥಿ ಸಂಘಟನೆಗಳು ಒಂದಾಗಿ ಪ್ರತಿಭಟಿಸಬೇಕಾಗಿದೆ ಎಂದು ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ದಿನಕರ ಶೆಟ್ಟಿ ತಿಳಿಸಿದರು.dinakar shetty acsa (2)

dinakar shetty acsa (3)
ಮಂಗಳೂರಿನಲ್ಲಿ ನಡೆದ ಪತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರತಿಭಾವಂತ ಬ್ಯಾಡ್ಮಿಂಟನ್ ಆಟಗಾರ್ತಿಯಾಗಿದ್ದ ಕಾವ್ಯಾಳ ಸಾವಿನ ಕುರಿತು ಹಲವಾರು ಅನುಮಾನಗಳಿದ್ದು ಪೊಲೀಸ್ ಇಲಾಖೆ ಈ ಕುರಿತು ತನಿಖೆ ನಡೆಸುತ್ತಿದ್ದರೂ ಸಹಾ ಇಲ್ಲಿಯವರೆಗೆ ಏನೂ ವಿಷಯಗಳನ್ನು ಏಕೆ ಬಹಿರಂಗಪಡಿಸಿಲ್ಲ ಎಂದು ಪ್ರಶ್ನಿಸಿದರು. ಅಗಷ್ಟ್ 9 ರಂದು ಮಂಗಳೂರಿನ ಜ್ಯೋತಿ ವೃತ್ತದಿಂದ ಜಿಲ್ಲಾಧಿಕಾರಿ ಕಛೇರಿವರೆಗೆ ಬೃಹತ್ ಪ್ರತಿಭಟನಾ ರ್ಯಾಲಿ ಹಾಗೂ ಪ್ರತಿಭಟನಾ ಸಭೆ ನಡೆಸಲು ನಿರ್ಧರಿಸಲಾಗಿದ್ದು ವಿದ್ಯಾಸಂಸ್ಥೆಯ ಮುಖ್ಯಸ್ಥರು ಭಾಗವಹಿಸುತ್ತೇನೆ ಎಂದು ತಿಳಿಸಿದ್ದಾರೆ ಎಂದರು. ಕಾವ್ಯಾಲ ಸಾವಿಗೆ ನ್ಯಾಯ ದೊರಕಿಸಿಕೊಡಲು ನಾವೆಲ್ಲಾ ಬದ್ದರಾಗಿದ್ದೇವೆ ಎಂದರು .ಪತ್ರಿಕಾಗೋಷ್ಠಿಯಲ್ಲಿ ಕ.ರ.ವೇ ಜಿಲ್ಲಾದ್ಯಕ್ಷ ಅನಿಲ್ ದಾಸ್ , ಸಾಮಾಜಿಕ ಕಾರ್ಯಕರ್ತ ರೋಬರ್ಟ್ ರೊಸಾರಿಯೋ , ರಘುವೀರ್ ಮತ್ತಿತ್ತರರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *