ಬಂಟ್ವಾಳ: ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಪಂಚಾಯತ್ ಸದಸ್ಯರು ಮತ್ತು ಕಾರ್ಯಕರ್ತರು ಶ್ರಮಿಸಬೇಕು ಎಂದು ಬಂಟ್ವಾಳ ಕ್ಷೇತ್ರ ಬಿಜೆಪಿ ಮುಖಂಡ ರಾಜೇಶ್ ನಾೈಕ್ ಉಳಿಪಾಡಿಗುತ್ತು ಹೇಳಿದರು.ಅರಳ ನವಶಕ್ತಿ ಯುವಕ ಮಂಡಲದಲ್ಲಿ ನಡೆದ ಅರಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಮತ್ತು ಸ್ಟವ್ ವಿತರಿಸಿ ಮಾತನಾಡಿದ ಅವರು ಸಂಸದ ನಳಿನ್ ಕುಮಾರ್ ಕಟೀಲ್ರವರು ಕೇಂದ್ರ ಸರಕಾರದ ಬಹಳಷ್ಟು ಯೋಜನೆಗಳನ್ನು ನಮ್ಮ ಜಿಲ್ಲೆಗೆ ತಂದಿದ್ದಾರೆ ಎಂದರು.
ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಬಂಟ್ವಾಳ ಕ್ಷೇತ್ರಕ್ಕೆ ಸಂಸದರು ಅತಿ ಹೆಚ್ಚು ಅನುದಾನವನ್ನು ಒದಗಿಸಿದ್ದು, ಮುಂದಿನ ದಿನಗಳಲ್ಲಿ ಸಂಸದರ ನೇತೃತ್ವದಲ್ಲಿ ಕೇಂದ್ರ ಸರಕಾರದ ಯೋಜನೆಗಳ ಕಾರ್ಯಾಗಾರವನ್ನು ಗ್ರಾಮ ಮಟ್ಟದಲ್ಲಿ ಆಯೋಜಿಸಲಾಗುವುದು ಎಂದ ಅವರು ಜನತೆ ಯೋಜನೆಗಳ ಸದುಪಯೋಗ ಪಡೆಯುವಂತೆ ಕಾರ್ಯಕ್ರವನ್ನು ರೂಪಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ 50ಕ್ಕೂ ಹೆಚ್ಚು ಫಲಾನುಭವಿಗಳಿಗೆ ಉಚಿತ ಗ್ಯಾಸ್ ಮತ್ತು ಸ್ಟವ್ವನ್ನು ವಿತರಿಸಲಾಯಿತು. ಅರಳ ಪಂಚಾಯತ್ ಅಧ್ಯಕ್ಷೆ ತುಂಗಮ್ಮ, ಉಪಾಧ್ಯಕ್ಷ ಜಗದೀಶ್ ಆಳ್ವ ಅಗ್ಗೊಂಡೆ, ಸದಸ್ಯರಾದ ಲಕ್ಷ್ಮೀಧರ ಶೆಟ್ಟಿ ಮಧ್ಯಾಳ, ಲಕ್ಷ್ಮೀಧರ ಪೂಜಾರಿ, ಗ್ಯಾಸ್ ಏಜೇನ್ಸಿಯ ಮಾಲಕ ಕರುಣಾಕರ ಶೆಟ್ಟಿ, ಪಕ್ಷದ ಪ್ರಮುಖರಾದ ರಮನಾಥ ರಾಯಿ, ಗಣೇಶ್ ರೈ ಮಾಣಿ, ಉಮೇಶ್ ಡಿ.ಎಂ, ಯೋಗೀಶ್ ಕೆ, ಅಶ್ವಥ್, ಹೇಮಂತ್ ಅರಳ, ತಿಮ್ಮಪ್ಪ ಬಿ, ಆನಂದ ಮೇಲಾಂಟ, ಶ್ರೀಧರ ಆಚಾರ್ಯ, ಪ್ರಸನ್ನ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಪಂಚಾಯತ್ ಸದಸ್ಯಡೊಂಬಯ್ಯ ಅರಳ ಕಾರ್ಯಕ್ರಮ ನಿರೂಪಿಸಿದರು.
