ಬಂಟ್ವಾಳ: ದ.ಕ.ಜಿ.ಪಂಚಾಯತ್, ತಾ.ಪಂ.ಬಂಟ್ವಾಳ, ಯುವ ಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯುವ ಜನ ಒಕ್ಕೂಟ ಬಂಟ್ವಾಳ(ರಿ),ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಬಂಟ್ವಾಳ, ಎಸ್.ವಿ.ಎಸ್. ದೇವಳ ವಿದ್ಯಾ ಸಂಸ್ಥೆ ಬಂಟ್ವಾಳ ಇದರ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಮಟ್ಟದ ದಸರಾ ಕ್ರೀಡಾ ಕೂm 2016-17 ಇದರ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಬಂಟ್ವಾಳ ಎಸ್.ವಿ.ಎಸ್. ದೇವಳ ಕ್ರೀಡಾಂಗಣದಲ್ಲಿ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ನೆರವೇರಿಸಿದರು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿಗಳು ದೈಹಿಕವಾಗಿ ಮತ್ತು ಮಾನಸಿಕವಾಗಿ ಬಲಿಷ್ಟಗೊಳ್ಳಲು ಇಂತಹ ಕ್ರೀಡಾ ಕೂಟಗಳು ಬಹಳಷ್ಟು ಸಹಕಾರಿಯಾಗಲಿವೆ ಎಂದು ಹೇಳಿದರು. ವಿದ್ಯಾರ್ಥಿಗಳಲ್ಲಿ ಆಡಗಿರುವ ಪ್ರತಿಭೆಯನ್ನು ಮತ್ತು ಮನೋಭಾವನೆಯನ್ನು ದಸರಾ ಕ್ರೀಡಾಕೂಟದಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಅವರು ಶಿಸ್ತು ಬದ್ದವಾದ ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಕೈಜೊಡಿಸುತ್ತಾರೆ ಎಂದರು. 
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ವಹಿಸಿದ್ದರು. ವೇದಿಕೆಯಲ್ಲಿ ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಮೀ ಸಿ.ಬಂಗೇರ, ಪುರಸಭಾ ಸದಸ್ಯ ಜಗದೀಶ ಕುಂದರ್, ಯುವ ಜನ ಒಕ್ಕೂಟ ಬಂಟ್ವಾಳ(ರಿ). ಇದರ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು, ಕ್ಷೇತ್ರ ಶಿಕ್ಷಾಣಾಧಿಕಾರಿ ಲೋಕೇಶ್ ಸಿ, ಬಂಟ್ವಾಳ ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯನ್ ಮಿರಾಂದ, ಬಂಟ್ವಾಳ ದೈಹಿಕ ಪರಿವೀಕ್ಷಣಾಧಿಕಾರಿ ರತ್ನಾವತಿ ಎ, ವಿಟ್ಲ ಅಧ್ಯಾಪಕರ ಸಂಘದ ಅಧ್ಯಕ್ಷ ರಮೇಶ್ ನಾಯಕ್ ರಾಯಿ, ಮತ್ತು ಶಿಕ್ಷಕ ಪ್ರಮುಖರಾದ ಗಂಗಾದರ ರೈ ಮಾಣಿ, ಅಖಿಲ ಶೆಟ್ಟಿ, ಮಹಮ್ಮ್ದ್ ಮಂಚಿ, ಎಸ್.ವಿ.ಎಸ್. ದೇವಳ ವಿದ್ಯಾ ಸಂಸ್ಥೆಯ ಮುಖ್ಯ ಶಿಕ್ಷಕಿ ಮತ್ತಿತರರು ಉಪಸ್ಥಿತರಿದ್ದರು. ಬಂಟ್ವಾಳ ಸಹಾಯಕ ಯುವ ಜನ ಸಬಲೀಕರಣ ಮತ್ತು ಕ್ರೀಡಾಧಿಕಾರಿ ನವೀನ್ ಪಿಎಸ್ ಸ್ವಾಗತಿಸಿದರು. ಬಂಟ್ವಾಳ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಜಗದೀಶ್ ಬಾಳ್ತಿಲ ವಂದಿಸಿದರು.
