ಬಂಟ್ವಾಳ : ತಾಲ್ಲೂಕಿನ ನರಿಕೊಂಬು ಸತ್ಯಶ್ರೀ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಅರ್ಹ ಫಲಾನುಭವಿಗಳಿಗೆ 94ಸಿ ಮತ್ತು 94ಸಿಸಿ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಕಂದಾಯ ನಿರೀಕ್ಷಕ ಕೆ.ರಾಮ ಮತ್ತು ಗ್ರಾಮಕರಣಿಕ ನಾಗರಾಜ ಇವರನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅಭಿನಂದಿಸಿದರು. ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಬ್ಬಾಸ್ ಆಲಿ, ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಉಮೇಶ ಬೋಳಂತೂರು, ಎಪಿಎಎಂಸಿ ಅಧ್ಯಕ್ಷ ಕೆ.ಪದ್ಮನಾಭ ರೈ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರಾಜೀವಿ ಪೂಜಾರಿ, ತಾಲ್ಲೂಕು ಪಂಚಾಯಿತಿ ಸದಸ್ಯೆ ಗಾಯತ್ರಿ ರವೀಂದ್ರ ಸಪಲ್ಯ, ಮಾಜಿ ಸದಸ್ಯ ಆಲ್ಫೋನ್ಸ್ ಮಿನೇಜಸ್ ಮತ್ತಿತರರು ಇದ್ದರು.
