ವಿಟ್ಲ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಹಾಗೂ ರೋಟರಿ ಕ್ಲಬ್ ಇದರ ಸಹಯೋಗದೊಂದಿಗೆ ಬೊಬ್ಬೆಕ್ಕೇರಿ ಗಜಾನನ ಸಭಾ ಭವನದಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿ ಎಸ್ ಟಿ) ಬಗ್ಗೆ ಕಾನೂನು ಮಾಹಿತಿ ಶಿಬಿರ 19-08-2017 ರಂದು ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆ ವಿಟ್ಲ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಹೆಚ್ ಜಗನ್ನಾಥ ಸಾಲಿಯಾನ್ ವಹಿಸಿದ್ದರು. ಈ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮಂಗಳೂರು ವಾಣಿಜ್ಯ ತೆರಿಗೆ ಅಧಿಕಾರಿ ಸಂಜಯ ಬಲಿಪ, ವಾಣಿಜ್ಯ ತೆರಿಗೆ ಆಯುಕ್ತ ಅಶೋಕ ಎ ಮಂಗಳೂರು ಇವರು ಭಾಗವಹಿಸಿ ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಸುರೇಂದ್ರ ಕಿಣಿ ಪುತ್ತೂರು ಮತ್ತು ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷ ಸಂಜೀವ ಪೂಜಾರಿ ಎಂ ಇವರು ಭಾಗವಹಿಸಿದ್ದರು. ಅಶೋಕ್ ಸ್ವಾಗತಿಸಿದರು. ವಿಟ್ಲ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ರಾಮದಾಸ ಶೆಣೈ ಪ್ರಸ್ತಾವಿಸಿ ವಂದಿಸಿದರು.
