ದಕ್ಷಿಣ ಕನ್ನಡ: ಆರ್‌ಎಸ್‌ಎಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಪಿ ಎಫ್ ಐ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.ಸುಹೇಲ್ ಹಾಗೂ ಸಾದಿಕ್ ಬಂಧಿತ ಆರೋಪಿಗಳು.
ಇದುವರೆಗೂ ಪ್ರಕರಣದಲ್ಲಿ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡದ ಎಸ್‌ಪಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.ಜುಲೈ 4ರಂದು ಮಾರಣಾಂತಿಕ ಹಲ್ಲೆಗೆ ಒಳಗಾಗಿದ್ದ ಆರ್‌ಎಸ್‌ಎಸ್ ಕಾರ್ಯಕರ್ತ ಶರತ್ ಮಡಿವಾಳ ಚಿಕಿತ್ಸೆ ಫಲಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಈ ಪ್ರಕರಣ ರಾಜ್ಯಾದ್ಯಂತ ಭಾರಿ ಸಂಚಲನ ಉಂಟು ಮಾಡಿತ್ತು.
