ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು ಇದರ ವತಿಯಿಂದ ಮಂಗಳೂರಿನ ರೆಡ್ ಕ್ಯಾಮಲ್ಟ್ ಇಸ್ಲಾಮಿಕ್ ಸ್ಕೂಲ್ ನಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿಟ್ಲ ಜೇಸಿ ಆಂಗ್ಲ ಮಾಧ್ಯಮ ಶಾಲೆಯ 8 ನೇ ತರಗತಿಯ ವಿದ್ಯಾರ್ಥಿ ನಿಶಿತ್ ಭಟ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಮಾಧವ ಅಳಿಕೆಯವರ ಶಿಷ್ಯ. ನೆತ್ರಕೆರೆ ಗಣೇಶ್ ಮತ್ತು ಅನಿತಾ ಭಟ್ ದಂಪತಿಯ ಪುತ್ರ.
