ಬಂಟ್ವಾಳ: ವಲಯಮಟ್ಟದ ತ್ರೋಬಾಲ್ ಪಂದ್ಯಾಟ ಸುಜೀರು ಸರಕಾರಿ ಪ್ರೌಢಶಾಲಾ ಮೈದಾನದಲ್ಲಿ ನಡೆಯಿತು.ಜಿ.ಪಂ. ಮಾಜಿ ಸದಸ್ಯ ಉಮ್ಮರ್ ಫಾರೂಕ್ ಅಧ್ಯಕ್ಷತೆ ವಹಿಸಿ ಮಾತನಾಡಿ ಸೋಲು ಗೆಲುವು ನಿರ್ಣಯಕ್ಕಾಗಿ ಮಾತ್ರ ಕ್ರೀಡೆ ಇರಬಾರದು ಬದಲಾಗಿ ವ್ಯಕ್ತಿಯ ದೈಹಿಕ ಹಾಗೂ ಬೌದ್ದಿಕ ವಿಕಾಸಕ್ಕೂ ಪೂರಕವಾಗುವ ನಿಟ್ಟಿನಲ್ಲಿ ಕ್ರೀಡೆಯಲ್ಲಿ ಭಾಗವಹಿಸಬೇಕು. ಶಾಲಾಯಲ್ಲಿ ನಡೆಯುವ ಕ್ರೀಡಾಕೂಟದಿಂದ ಗ್ರಾಮೀಣ ಭಾಗದ ಪ್ರತಿಭೆಗಳನ್ನು ಗುರುತಿಸಲು ಸಾಧ್ಯವಾಗುತ್ತದೆ. ಆ ಮೂಲಕ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಲು ಅವಕಾಶ ಸಿಕ್ಕಂತಾಗುತ್ತದೆ ಎಂದರು.

BTW_AUG29_2B
ಪುದು ಗ್ರಾ.ಪಂ ಉಪಾಧ್ಯಕ್ಷ ಹಾಶೀರ್ ಪೇರಿಮಾರ್ ತ್ರೋಬಾಲ್ ಪಂದ್ಯಾಟ ಉದ್ಘಾಟಿಸಿದರು. ಅವರು ಮಾತನಾಡಿ ಕ್ರೀಡಾಪಟುಗಳನ್ನು ಅವರ ಪ್ರತಿಭೆಯನ್ನು ಗುರುತಿಸಿ ಪೆÇ್ರೀತ್ಸಾಹಿಸಬೇಕೆ ವಿನಃ ಅವರ ಜಾತಿ ಆಧಾರದಿಂದಲ್ಲ. ಆದರೆ ಇತ್ತಿಚಿನ ದಿನಗಳಲ್ಲಿ ಜಾತಿ ಆಧಾರದಲ್ಲಿ ಕ್ರೀಡಾಪಟುಗಳನ್ನು ಗುರುತಿಸುತ್ತಿರುವುದು ವಿಷಾಧನೀಯ ಎಂದರು. ಶಿಕ್ಷಣ ಸಂಯೋಜಕ ಶ್ರೀಕಾಂತ್, ಪುದು ಗ್ರಾ.ಪಂ.ಅಧ್ಯಕ್ಷೆ ಆತೀಕಾ, ಪಂಚಾಯಿತಿ ಸದಸ್ಯರಾದ ರಮ್ಲಾನ್, ಅಖ್ತರ್ ಹುಸೈನ್, ಮನೋರಮಾ ದೈಹಿಕ ಪರಿವೀಕ್ಷಣಾಧಿಕಾರಿ ರತ್ನಾವತಿ ಶಾಲಾಭಿವೃದ್ದಿ ಸಮಿತಿ ಸದಸ್ಯರಾದ ಜುಬೇರ್, ಮಾಲತಿ, ಕಿಶೋರ್, ಸಿಆರ್ ಪಿ ನಂದ, ರಝಾಕ್, ಗುರುಮೂರ್ತಿ ವೇದಿಕೆಯಲ್ಲಿದ್ದರು. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶಶಿಮಂಗಳ ಸ್ವಾಗತಿಸಿದರು. ಶಿಕ್ಷಕ ಬಿ.ಎಂ. ತುಂಬೆ ಕಾರ್ಯಕ್ರಮ ನಿರೂಪಿಸಿದರು. ಧಾರಾಕಾತ ಮಳೆ ಸುರಿಯುತ್ತಿದ್ದರೂ ವಿದ್ಯಾರ್ಥಿಗಳು ಉತ್ಸಾಹದಿಂದ ಪಂದ್ಯಾಟದಲ್ಲಿ ಭಾಗವಹಿಸಿದರು.

By suddi9

Leave a Reply

Your email address will not be published. Required fields are marked *