ಬಂಟ್ವಾಳ :ನರೇಂದ್ರ ಮೋದಿಯ ನೇತೃತ್ವದ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಡಿಯಲ್ಲಿ ಸಜಿಪಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಮತ್ತು ಸ್ಟವ್ ವಿತರಣಾ ಕಾರ್ಯಕ್ರಮವು ನಗ್ರಿ ಶಾರದಾಂಭ ಭಜನ ಮಂದಿರದಲ್ಲಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಬಿಜೆಪಿ ಬಂಟ್ವಾಳ ಕ್ಷೇತ್ರದ ಮುಖಂಡ ರಾಜೇಶ್ ನಾೈಕ್‍ರವರು ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ಪಂಚಾಯತ್ ಸದಸ್ಯರು ಮತ್ತು ಕಾರ್ಯಕರ್ತರದ್ದಾಗಿದೆ ಎಂದರು.
ಸಂಸದ ನಳಿನ್ ಕುಮಾರ್ ಕಟೀಲ್‍ರವರು ಕೇಂದ್ರ ಸರಕಾರದ ಬಹಳಷ್ಟು ಯೋಜನೆಗಳನ್ನು ನಮ್ಮ ಜಿಲ್ಲೆಗೆ ತಂದಿದ್ದಾರೆ. ಬಂಟ್ವಾಳ ಕ್ಷೇತ್ರಕ್ಕೆ ಅತೀ ಹೆಚ್ಚು ಅನುದಾನ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ನಳಿನ್ ಕುಮಾರ್ ಕಟೀಲ್‍ರವರ ನೇತೃತ್ವದಲ್ಲಿ ಕೇಂದ್ರ ಸರಕಾರದ ಯೋಜನೆಗಳ ಕಾರ್ಯಗಾರವನ್ನು ಗ್ರಾಮ ಮಟ್ಟದಲ್ಲಿ ಮಾಡಿ ಯೋಜನೆಗಳ ಪ್ರಯೋಜನೆಗಳನ್ನು ಬಂಟ್ವಾಳ ಕ್ಷೇತ್ರದ ಜನತೆ ಪಡೆಯುವಂತ ನಿಟ್ಟಿನಲ್ಲಿ ಕಾರ್ಯಕ್ರವನ್ನು ರೂಪಿಸಲಾಗುವುದು ಎಂದರು.
ಬಂಟ್ವಾಳ ಕ್ಷೇತ್ರ ಬಾರತೀಯ ಜನತಾ ಪಾರ್ಟಿಯ ಪ್ರಧಾನಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಪ್ರಧಾನಿ ನರೇಂದ್ರ ಮೋದಿಯವರು ಅನಾರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಹಾಗೂ ಹೊಗೆಮುಕ್ತ ಭಾರತ ನಿರ್ಮಾಣಕ್ಕಾಗಿ ಉಜ್ವಲ ಯೋಜನೆಯಂತಹ ಮಹತ್ವಾಕಾಂಕ್ಷೆಯ ಯೋಜನೆಯನ್ನು ಜಾರಿಗೆ ತಂದಿದ್ದಾರೆ.ಈ ಯೋಜನೆಯಲ್ಲಿ ಬಂಟ್ವಾಳ ಕ್ಷೇತ್ರದ ಸಾವಿರಾರೂ ಬಡಕುಟುಂಬಗಳು ಯೋಜನೆಯ ಪ್ರಯೋಜನೆಯನ್ನು ಪಡೆದುಕೊಂಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ 50ಕ್ಕೂ ಹೆಚ್ಚು ಫಲಾನುಭವಿಗಳಿಗೆ ಉಚಿತ ಗ್ಯಾಸ್ ಮತ್ತು ಸ್ಟವ್‍ವನ್ನು ವಿತರಿಸಲಾಯಿತು. ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷ ಯಶವಂತ ದೇರಾಜೆ, ಪ್ರಶಾಂತ್ ಗ್ಯಾಸ್ ಎಜೆನ್ಸಿ ಮಾಲಕ ಡೋಲ್ಪಿ ಪ್ರಶಾಂತ್ ಡಿಸೋಜ, ಬಂಟ್ವಾಳ ಬಿಜೆಪಿ ಕಾರ್ಯದರ್ಶಿ ರಮನಾಥ ರಾಯಿ, ಪಂಚಾಯತ್ ಸದಸ್ಯ ಹರೀಶ್ ಕಾರಜೆ, ಬಿಜೆಪಿ ಪಂಚಾಯತ್ ಸಮಿತಿ ಅಧ್ಯಕ್ಷ ಸುರೇಶ್ ಪೂಜಾರಿ ಸರ್ತಾವು ಮತ್ತು ಇತರರು ಉಪಸ್ಥಿತರಿದ್ದರು.ಪಂಚಾಯತ್ ಸದಸ್ಯ ಸೀತಾರಾಮ್ ಅಗೋಳಿಬೆಟ್ಟು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
