ಬಂಟ್ವಾಳ ತಾಲ್ಲೂಕು ಪಂಚಾಯಿತಿನಲ್ಲಿ ಬುಧವಾರ ನಡೆದ ಸಾಮಾನ್ಯಸಭೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಪರಸ್ಪರ ಮಾತಿನ ಚಕಮಕಿ ನಡೆಯಿತು.
ನಿರುಪಯುಕ್ತ ಕೊಳವೆ ಬಾವಿ ಮುಚ್ಚಲು ಆಗ್ರಹ
ಸುದ್ದಿ9ಬಂಟ್ವಾಳ:ರಾಜ್ಯದ ಹಲವೆಡೆ ನಿರುಪಯುಕ್ತ ಕೊಳವೆ ಬಾವಿಗೆ ಮಕ್ಕಳು ಬಿದ್ದು ಸಾವನ್ನಪ್ಪುತ್ತಿರುವ ಸುದ್ದಿ ಹೆಚ್ಚಳವಾಗುತ್ತಿದ್ದಂತೆಯೇ ಬಂಟ್ವಾಳ ತಾಲ್ಲೂಕಿನಲ್ಲಿ ಇಂತಹ ಪ್ರಸಂಗ ನಡೆಯದಂತೆ ತಡೆಯಲು ಕೂಡಲೇ ಪ್ರತಿ ಗ್ರಾಮ ಪಂಚಾಯಿತಿಗೆ ಸುತ್ತೋಲೆ ಕಳುಹಿಸುವಂತೆ ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭೆಯಲ್ಲಿ ಬುಧವಾರ ಕೇಳಿ ಬಂದಿದೆ. ತಾ.ಪಂ.ಅಧ್ಯಕ್ಷ ಯಶವಂತ ದೇರಾಜೆ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ವಿರೋಧ ಪಕ್ಷ (ಕಾಂಗ್ರೆಸ್) ಸದಸ್ಯ ಮಾಧವ ಎಸ್.ಮಾವೆ ಈ ಬಗ್ಗೆ ವಿಷಯ ಪ್ರಸ್ತಾಪಿಸಿದರು. ಈಗಾಗಲೇ ಮಂಚಿ ಸಮೀಪದ ಕುಕ್ಕಾಜೆ ಅಂಗನವಾಡಿ ಕೇಂದ್ರ ಬಳಿ ನಿರುಪಯುಕ್ತ ತೆರೆದ ಕೊಳವೆ ಬಾವಿ ಇರುವ ಬಗ್ಗೆ ವಿವಿಧ ಮಾಧ್ಯಮಗಳಲ್ಲಿ ವರದಿಯಾಗಿದೆ ಎಂದು ಅವರು ಹೇಳಿದರು.
ಈ ವಿಷಯಕ್ಕೆ ಸಂಬಂಧಿಸಿದಂತೆ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯನ್ ಮಿರಾಂದ ತಕ್ಷಣವೇ ಪ್ರತಿಕ್ರಿಯಿಸಿ, ಈ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿಯಿಂದ ಪ್ರತೀ ತಾಲ್ಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿಗೆ ಸುತ್ತೋಲೆ ಬಂದಿದೆ ಎಂದರು.
ತಾಲ್ಲೂಕಿನ ಕೆಲವೊಂದು ಶಾಲೆ ಮತ್ತು ಅಂಗನವಾಡಿ ಕೇಂದ್ರಗಳ ಬಳಿ ಕಲ್ಲಿನ ಕ್ವಾರೆಯಲ್ಲಿ ನೀರು ತುಂಬಿಕೊಂಡಿದ್ದು, ಆವರಣ ಗೋಡೆ ಅಥವಾ ತಡೆಬೇಲಿ ನಿಮರ್ಿಸಿಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ ಹೇಳಿದರು.
ಬಿ.ಸಿ.ರೋಡ್ನಲ್ಲಿ ಸ್ತ್ರೀಶಕ್ತಿ ಭವನ ಕಟ್ಟಡ ಏಲಂ ಪ್ರಕ್ರಿಯೆ ಬಗ್ಗೆ ಅಧಿಕಾರಿಗಳು ಸದಸ್ಯರಿಗೆ ಮಾಹಿತಿ ನೀಡುತ್ತಿಲ್ಲ ಎಂದು ಸದಸ್ಯೆ ಐಡಾ ಸುರೇಶ ಆರೋಪಿಸಿದರು. ಮಳೆಗಾಲದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕ ರಸ್ತೆ ಮತ್ತು ಕಟ್ಟಡ ಬಳಿ ವಾಲಿಕೊಂಡಿರುವ ಹಳೆ ಮರಗಳನ್ನು ಕಡಿಯಲು ಅರಣ್ಯ ಇಲಾಖೆ ಮುಮದಾಗಬೇಕು ಎಂದು ಸದಸ್ಯ ದಿನೇಶ ಅಮ್ಟೂರು ಆಗ್ರಹಿಸಿದರು.
ಜಿ.ಪಂ.ಸದಸ್ಯರಾದ ಆರ್.ಚೆನ್ನಪ್ಪ ಕೋಟ್ಯಾನ್, ಬಿ.ಸಂತೋಷ್ ಕುಮಾರ್ ರೈ, ನಳಿನಿ ಬಿ.ಶೆಟ್ಟಿ, ತಾ.ಪಂ.ಸದಸ್ಯರಾದ ಸಂಪತ್ ಕುಮಾರ್ ಶೆಟ್ಟಿ, ಆನಂದ ಶಂಭೂರು, ಶೈಲಜ ಶೆಟ್ಟಿ ಮತ್ತಿತರರು ಚಚರ್ೆಯಲ್ಲಿ ಪಾಲ್ಗೊಂಡರು.
ತಾ.ಪಂ.ಉಪಾಧ್ಯಕ್ಷೆ ವಿಲಾಸಿನಿ ಪೂಜಾರಿ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

