ಬಂಟ್ವಾಳ: ತಾಲೂಕಿನ ಬಂಟರ ಸಂಘದ ಅಧ್ಯಕ್ಷರಾಗಿ ಮುಂಬೈ ಉದ್ಯಮಿ ನಗ್ರಿಗುತ್ತು ವಿವೇಕ್ ಶೆಟ್ಟಿ ಪುನರಾಯ್ಕೆಯಾಗಿದ್ದಾರೆ. ಮುಂಬೈನ ಮುಲುಂಡ್ ಬಂಟ್ಸ್ ಸಂಸ್ಥೆ ಸ್ಥಾಪಕಾಧ್ಯಕ್ಷರಾಗಿ, ಮುಂಬೈ ಬಂಟರ ಸಂಘದ ಟ್ರಸ್ಟಿಯಾಗಿ, ಉನ್ನತ ಶಿಕ್ಷಣ ಸಮಿತಿ ಉಪ ಕಾರ್ಯಾಧ್ಯಕ್ಷರಾಗಿ, ಪ್ರಸ್ತುತ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿ ಕಾರ್ಯಾಧ್ಯಕ್ಷರಾಗಿ ಶ್ರಮಿಸುತ್ತಿದ್ದಾರೆ.

22btl- Vivek Shetty

ಕಳೆದ ಮೂರು ವರ್ಷಗಳ ಹಿಂದೆ ಬಂಟವಾಳದ ಬಂಟರ ಸಂಘದ ಅಧ್ಯಕ್ಷರಾಗಿ ಬ್ರಹ್ಮರಕೂಟ್ಲು ರಾಷ್ಟ್ರೀಯ ಹೆದ್ದಾರಿ ಬಳಿ ‘ಸುಸಜ್ಜಿತ ಬಂಟವಾಳದ ಬಂಟರ ಭವನ’ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದರು.
ಬಂಟವಾಳದ ಬಂಟರ ಭವನದಲ್ಲಿ ನಡೆದ ಸಂಘದ ವಿಶೇಷ ಸಭೆಯಲ್ಲಿ ಇವರನ್ನು ಸಮಿತಿ ಸದಸ್ಯರು ಮತ್ತೆ ಅಧ್ಯಕ್ಷರಾಗಿ ಪುನರಾಯ್ಕೆಗೊಳಿಸಿದ್ದಾರೆ. ಈ ಸಭೆಯಲ್ಲಿ ಹಿರಿಯ ಹಿತಿ ಏರ್ಯ ಲಕ್ಷ್ಮೀನಾರಾಯಣ ಆಳ್ವ, ಸಮಾಜ ಸೇವಕ ತುಂಬೆ ಜಯರಾಮ್ ಸಾಮಾನಿ, ಸಂಘದ ಟ್ರಸ್ಟಿ ಬೋಳಂತೂರುಗುತ್ತು ಶಾಂತಾರಾಮ ಶೆಟ್ಟಿ ಮತ್ತಿತರರು ಇದ್ದರು ಎಂದು ಪ್ರಕಟಣೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *