ಬಂಟ್ವಾಳ : ತಾ| ಇರ್ವತ್ತೂರುಪದವು ಶ್ರೀ ಶಾರದೋತ್ಸವ ಸಮಿತಿ ಇದರ ಆಶ್ರಯದಲ್ಲಿ ಪ್ರಥಮ ವರ್ಷದ ಶ್ರೀ ಶಾರದಾ ಪೂಜಾ ಮಹೊತ್ಸವ ವಿವಿಧ ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಮೂಡುಪಡುಕೋಡಿ ಸ.ಹಿ.ಪ್ರಾ.ಶಾಲೆ ಶಾಲಾ ವಠಾರದಲ್ಲಿ ಸೆ. 27ರಂದು ಜರಗಲಿದೆ.
ಬೆಳಗ್ಗೆ ಶ್ರೀ ಶಾರದಾ ದೇವಿಯ ಪ್ರತಿಷ್ಠೆ, ಕ್ರೀಡಾ ಸ್ಪರ್ಧೆಗಳು, ಮಧ್ಯಾಹ್ನ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ಮತ್ತು ಪಾರ್ಥ ಸಾರಥ್ಯ ತಾಳ ಮದ್ದಳೆ ನಡೆಯಲಿರುವುದು.ಸಂಜೆ ಧಾರ್ಮಿಕ ಸಭೆ, ಸಮ್ಮಾನ, ಪ್ರತಿಭಾ ಪುರಸ್ಕಾರ ನಡೆಯಲಿದ್ದು, ಒಡಿಯೂರು ಶ್ರೀ ಗುರುದೇವಾಂದ ಸ್ವಾಮೀಜಿ ಅವರು ಆಶೀರ್ವಚನ ನೀಡಲಿರುವರು. ಪುಂಜಾಲಕಟ್ಟೆ ಸ. ಪ್ರ. ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ | ಗಣಪತಿ ಭಟ್ ಕುಳಮರ್ವ ಅಧ್ಯಕ್ಷತೆ ವಹಿಸಲಿರುವರು. ನಿವೃತ್ತ ಶಿಕ್ಷಕ ಸುಂದರ ಶೆಟ್ಟೆ ಬಜೆ ಮತ್ತಿತರರು ಅತಿಥಿಗಳಾಗಿ ಭಾಗವಹಿಸುವರು. ಸಂಜೆ ಮಹಾಪೂಜೆ,ಪ್ರಸಾದ ವಿತರಣೆ,ಬಳಿಕ ಶ್ರೀ ಶಾರದಾ ಮಾತೆಯ ಶೋಭಾಯಾತ್ರೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
