ಬಂಟ್ವಾಳ :ಅಜ್ಜಿಬೆಟ್ಟು ಗ್ರಾಮದ ಪದವು ಶ್ರೀ ದುರ್ಗಾಪರಮೆಶ್ವರಿ ದೇವಸ್ಥಾನ ಪುನರ್ನಿರ್ಮಾಣದ ಸಿದ್ಧತೆಯಲ್ಲಿದ್ದು, ಶ್ರೀ ಕ್ಷೇತ್ರದಲ್ಲಿ ಕೈಗೊಳ್ಳಲಿರುವ ಜೀರ್ಣೋದ್ಧಾರ ಕಾರ್ಯಗಳ ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮ ದೇವಸ್ಥಾನದ ಸಮುದಾಯ ಭವನದಲ್ಲಿ ಶನಿವಾರ ಜರಗಿತು.
ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ದೈವ ಸಂಕಲ್ಪದ ಜತೆ ಕಾಲ ಕೂಡಿ ಬರುವಾಗ ದೇವಸ್ಥಾನಗಳು ಜೀರ್ಣೋದ್ಧಾರಗೊಳ್ಳುತ್ತದೆ. ಈ ಪುಣ್ಯ ಕಾರ್ಯದಲ್ಲಿ ಭಾಗಿಗಳಾಗುವುದು ನಮ್ಮ ಯೋಗ ಭಾಗ್ಯವಾಗಿದೆ. ಎಲ್ಲರೂ ಒಗ್ಗೂಡಿದಾಗ ಕಾರ್ಯ ಯಶಸ್ವಿಯಾಗಿತ್ತದೆ ಎಂದು ಹೇಳಿದರು.

3009pkt1
ಧ. ಗ್ರಾ.ಯೋಜನೆ ಉಡುಪಿ ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಿ ಮಾತನಾಡಿ, ಪುನರ್ನಿರ್ಮಾಣ ಕಾರ್ಯದಲ್ಲಿ ಶ್ರದ್ದಾ ಭಕ್ತಿಯಿಂದ ಭಾಗಿಗಳಾಗಬೇಕು. ಶ್ರಮ ವಹಿಸಿ ನಮ್ಮದೆನ್ನುವ ಭಾವನೆಯಿಂದ ತೊಡಗಿಸಿಕೊಂಡಾಗ ಅಭಿವೃದ್ಧಿಯಾಗುವುದು ಎಂದರು.
ಕಟೀಲು ಕಾಲೇಜು ಪ್ರಾಧ್ಯಾಪಕ ಡಾ| ಸೋಂದ ಭಾಸ್ಕರ ಭಟ್ ಧಾರ್ಮಿಕ ಉಪನ್ಯಾಸ ನೀಡಿ, ಗ್ರಾಮದಲ್ಲಿ ಶಾಲೆ, ದೇವಸ್ಥಾನಗಳು ಉತ್ತಮವಾಗಿದ್ದರೆ ಗ್ರಾಮದ ಶ್ರೇಯೋಭಿವೃದ್ಧಿಯಾಗುವುದು. ಗ್ರಾಮಸ್ಥರು ಜೀರ್ಣೋದ್ಧಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಸಂಕಲ್ಪ, ಮಾನಸಿಕ ಸಿದ್ಧತೆ ಅಗತ್ಯವಾಗಿದೆ ಎಂದರು.
ಶ್ರೀ ಕ್ಷೇತ್ರದ ತಂತ್ರಿ ವೇ| ಮೂ| ಶ್ರೀಪಾದ ಪಾಂಗಣ್ಣಾಯ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಯಾದವ ಕೋಟ್ಯಾನ್, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಕುಂಡೋಳಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಸಂತ ಶೆಟ್ಟಿ ಕೇದಗೆ ವೇದಿಕೆಯಲ್ಲಿದ್ದರು.
ಗೌರವಾಧ್ಯಕ್ಷರಾದ ಬಾಬು ಪೂಜಾರಿ ಕೌಡೋಡಿಗುತ್ತು, ಭೋಜರಾಜ ಶೆಟ್ಟಿ ಕೊರಗಟ್ಟೆ, ಸಮಿತಿ ಪದಾ„ಕಾರಿಗಳು ಮತ್ತು ಸದಸ್ಯರು, ವ್ಯವಸ್ಥಾಪನ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಶಿಕ್ಷಕ, ಕಾರ್ಯದರ್ಶಿ ಹರಿಪ್ರಸಾದ್ ಆಲದಪದವು ಸ್ವಾಗತಿಸಿದರು. ಪ್ರ. ಕಾರ್ಯದರ್ಶಿ ಯೋಗೀಶ್ ಕಲಸಡ್ಕ ಪ್ರಸ್ತಾವಿಸಿದರು. ಭರತ್ ಕುಮಾರ್ ಜೈನ್ ವಂದಿಸಿದರು. ಪುನೀತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

 

By suddi9

Leave a Reply

Your email address will not be published. Required fields are marked *