ಬಂಟ್ವಾಳ: ಸಹಸ್ರಾರು ವರ್ಷಗಳ ಪರಂಪರೆ ಮತ್ತು ವಿಶೇಷತೆ ಹೊಂದಿರುವ ಈ ದೇಶದಲ್ಲಿ ಪ್ರತಿಯೊಂದು ಹಬ್ಬಗಳ ಆಚರಣೆಯಲ್ಲಿಯೂ ಒಂದೊಂದು ಹಿನ್ನೆಲೆ ಅಡಗಿರುತ್ತದೆ. ಇದರಿಂದಾಗಿ ಪ್ರಧಾನಿ ನರೇಂದ್ರ ಮೋದಿ ಕೂಡಾ ದೇಶದ ಹಿತಕ್ಕಾಗಿ ‘ನವರಾತ್ರಿ ವೃತಾಚರಣೆ’ ಕೈಗೊಳ್ಳುವ ಮೂಲಕ ಜಗತ್ತಿನಲ್ಲಿ ಗಮನ ಸೆಳೆದಿದ್ದಾರೆ ಎಂದು ಮಾಜಿ ಸಚಿವ, ವಿಧಾನಪರಿಷತ್ ಸದಸ್ಯ ಬಿ.ಜೆ.ಪುಟ್ಟಸ್ವಾಮಿ ಹೇಳಿದ್ದಾರೆ.ತಾಲ್ಲೂಕಿನ ರಾಯಿ-ಕೊಯಿಲ-ಅರಳ ಹಿಂದೂ ಧರ್ಮೋತ್ಥಾನ ವೇದಿಕೆ ಟ್ರಸ್ಟ್ ಮತ್ತು ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ವತಿಯಿಂದ ಕೊಯಿಲದಲ್ಲಿ 15ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಪ್ರಯುಕ್ತ ಭಾನುವಾರ ಏರ್ಪಡಿಸಿದ್ದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು.

1btl-Koila
ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿದರು. ಜಗತ್ತಿನಲ್ಲಿ ಭಾರತದ ಆಧ್ಯಾತ್ಮಿಕ ಶಕ್ತಿ ಮತ್ತು ತ್ಯಾಗದ ಸಂಕೇತವಾಗಿರುವ ಕೇಸರಿ ವಸ್ತ್ರಕ್ಕೆ ತನ್ನದೇ ಆದ ಹಿನ್ನೆಲೆ ಇದೆ. ಇಲ್ಲಿನ ಆಧ್ಯಾತ್ಮಿಕ ಶಿಕ್ಷಣಕ್ಕೆ ವಿದೇಶೀಯರು ಕೂಡಾ ಆಕರ್ಷಿತರಾಗಿದ್ದಾರೆ ಎಂದರು.ಸಂಸ್ಕಾರ ಭಾರತಿ ಜಿಲ್ಲಾ ಸಂಚಾಲಕ ಸೂರ್ಯನಾರಾಯಣ ಭಟ್ ಕಶೆಕೋಡಿ ದಿಕ್ಸೂಚಿ ಭಾಷಣ ಮಾಡಿದರು. ದುಷ್ಟರ ನಿಗ್ರಹ ಮತ್ತು ಶಿಷ್ಟರ ರಕ್ಷಣೆಗಾಗಿ ಶ್ರೀದೇವಿಗೆ ತ್ರಿಮೂರ್ತಿಗಳು ಕೂಡಾ ಶಕ್ತಿ ಅನುಗ್ರಹಿಸಿದ್ದರು ಎಂದರು. ರಾಜ್ಯ ಬಿಜೆಪಿ ಸಹ ವಕ್ತಾರೆ ಸುಲೋಚನಾ ಜಿ.ಕೆ.ಭಟ್, ಬಿಲ್ಲವ ಮಹಾಮಂಡಲ ವಕ್ತಾರ ಕೆ.ಹರಿಕೃಷ್ಣ ಬಂಟ್ವಾಳ್, ಜಿಲ್ಲಾ ಬಿಜೆಪಿ ವಕ್ತಾರ ಜಿತೇಂದ್ರ ಎಸ್.ಕೊಟ್ಟಾರಿ, ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗ ಮೋರ್ಚಾ  ಕಾರ್ಯದರ್ಶಿ ಕೃಷ್ಣಪ್ಪ ಪೂಜಾರಿ ಕಲ್ಲಡ್ಕ, ಅಧ್ಯಕ್ಷ ಸದಾನಂದ ನಾವೂರ ಮತ್ತಿತರರು ಶುಭ ಹಾರೈಸಿದರು.

ಉದ್ಯಮಿಗಳಾದ ಎಂ.ಸಿ.ಶೆಟ್ಟಿ ಮಂಗಳೂರು, ಎಂ.ದೇವಪ್ಪ ಶೆಟ್ಟಿ ಮಾವಂತೂರು, ಚಿತ್ರನಿಮರ್ಾಪಕ ತಾರನಾಥ ಶೆಟ್ಟಿ ಬೋಳಾರ, ರಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ದಯಾನಂದ ಸಪಲ್ಯ, ಅರಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ತುಂಗಮ್ಮ, ಟ್ರಸ್ಟಿನ ಅಧ್ಯಕ್ಷ ಎಂ.ದುಗರ್ಾದಾಸ ಶೆಟ್ಟಿ ಮಾವಂತೂರು, ಸಮಿತಿ ಅಧ್ಯಕ್ಷ ಸವಿನ್ ಕುಮಾರ್ ಜೈನ್ ಮತ್ತಿತರರು ಇದ್ದರು.ಟ್ರಸ್ಟಿ ವಸಂತ ಕುಮಾರ್ ಅಣ್ಣಳಿಕೆ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಟ್ರಸ್ಟಿ ಡೊಂಬಯ ಬಿ.ಅರಳ ವಂದಿಸಿದರು. ದಿನೇಶ ಕುದ್ಕೋಳಿ ಕಾರ್ಯಕ್ರಮ ನಿರೂಪಿಸಿದರು. ಇದೇ ವೇಳೆ ಕಲ್ಲಡ್ಕ ವಿಠಲ ನಾಯಕ್ ತಂಡದಿಂದ ‘ಗೀತ ಸಾಹಿತ್ಯ ಸಂಭ್ರಮ’ ಮತ್ತು ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ‘ಯಕ್ಷಗಾನ ಹಾಸ್ಯ ವೈಭವ’ ತಾಳಮದ್ದಳೆ ಕೂಟ ನಡೆಯಿತು

By suddi9

Leave a Reply

Your email address will not be published. Required fields are marked *