ಮಂಗಳೂರು:ಆರ್‍ಎಸ್‍ಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಸಾಲು ಸಾಲು ಹತ್ಯೆಯನ್ನು ಖಂಡಿಸಿ ಕಣ್ಣೂರಿನ ಪಯ್ಯನೂರಿನಲ್ಲಿ ಹಮ್ಮಿಕೊಂಡಿರುವ ಜನರಕ್ಷಾ ಯಾತ್ರೆಯಲ್ಲಿ ಪಾಲ್ಗೊಳ್ಳಲು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಡರಾತ್ರಿ ಮಂಗಳೂರಿಗೆ ಆಗಮಿಸಿದ್ದಾರೆ. ರಾತ್ರಿ ಸುಮಾರು 11.45ರ ಹೊತ್ತಿಗೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಯೋಗಿ ಅವರನ್ನ ದ.ಕ ಲೋಕಸಭಾ ಸಂಸದ ನಳೀನ್ ಕುಮಾರ್ ಕಟೀಲ್ ಸ್ವಾಗತಿಸಿದರು. ಈ ವೇಳೆ ಅಪಾರ ಸಂಖ್ಯೆಯ ಬಿಜೆಪಿ ಕಾರ್ಯಕರ್ತರು ಮತ್ತು ಬಿಜೆಪಿ ಅಭಿಮಾನಿಗಳು ಕೂಡ ಸೇರಿದ್ದರು. ಬಳಿಕ ಯೋಗಿ ಅಲ್ಲಿಂದ ನೇರವಾಗಿ ರಸ್ತೆ ಮೂಲಕ ಕೇರಳದ ಕಣ್ಣೂರಿಗೆ ತೆರಳಿದರು.Yogi-Adityanath-002

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‍ಶಾ ನಿನ್ನೆ ಯಾತ್ರೆಗೆ ಚಾಲನೆ ನೀಡಿದ್ದರು. ಇದರ ಬೆನ್ನಲ್ಲೇ ಬಿಜೆಪಿ ಫೈರ್ ಬ್ರಾಂಡ್ ಉತ್ತರ ಪ್ರದೇಶ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್ ಇಂದು ನಡೆಯಲಿರುವ ಜನರಕ್ಷ ಯಾತ್ರೆಗೆ ಕೈಜೋಡಿಸಲಿದ್ದಾರೆ. ಯೋಗಿ ಆದಿತ್ಯನಾಥ್ ಅವರು ಇಂದು ಕೇಚೆರಿಯಿಂದ ಕಣ್ಣೂರಿನವರೆಗೆ ಜನ ರಕ್ಷ ಯಾತ್ರೆಯನ್ನು ಮುನ್ನಡೆಸಲಿದ್ದಾರೆ. ಜನರಕ್ಷಾ ಯಾತ್ರೆ ಕೇರಳದ ವಿವಿಧ ಭಾಗದಲ್ಲಿ ಸಂಚರಿಸಿ ಅಕ್ಟೋಬರï 17 ರಂದು ತಿರುವನಂತಪುರಂನಲ್ಲಿ ಕೊನೆಗೊಳ್ಳಲಿದೆ ಎಂದು ಹೇಳಲಾಗಿದೆ.

By suddi9

Leave a Reply

Your email address will not be published. Required fields are marked *