ಬಂಟ್ವಾಳ:ತಾಲ್ಲೂಕಿನ ಎಸ್ಸೆಸ್ಸೆಫ್ ಬಂಟ್ವಾಳ ಘಟಕ ಸಹಿತ ಇಂಡಿಯನ್ ರೆಡ್ಕ್ರಾಸ್ ಸೊಸೈಟಿ ಮತ್ತು ಮಂಗಳೂರು ಲೇಡಿಗೋಶನ್ ಆಸ್ಪತ್ರೆ ಇದರ ವತಿಯಿಂದ ಇದೇ 8ರಂದು ಬೆಳಿಗ್ಗೆ 8.30ಕ್ಕೆ ಬಿ.ಸಿ.ರೋಡ್ ಸಂಘದ ಕಚೇರಿಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಇದೇ 10ರಂದು ಎಸ್ಸೆಸ್ಸೆಫ್ ಬಂಟ್ವಾಳ ವಿಭಾಗ ಪ್ರತಿಭೋತ್ಸವ-2017 ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
