ಗುರುಪುರ : ಗುರುಪುರ ಸೇತುವೆಯಿಂದ ನಿನ್ನೆ ವ್ಯಕ್ತಿಯೊಬ್ಬರು ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು(ಅ.14) ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳೀಯರ ಸಹಾಯದಿಂದ ನದಿಯಲ್ಲಿ ಹುಡುಕಾಟ ಆರಂಭಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಮಳಲಿ ಯ ಬಾಕಿಮಾರು ನಿವಾಸಿ, ವಿವಾಹಿತ ಭೋಜ(45) ಆಗಿದ್ದು, ಇವರು ವೃತ್ತಿಯಲ್ಲಿ ಮೇಸ್ತ್ರಿಯಾಗಿದ್ದರು. ನಿನ್ನೆ ಸಂಜೆ ಹೊತ್ತಿಗೆ ಇವರು ಆತ್ಮಹತ್ಯೆ ಮಾಡಿಕೊಂಡಿದ್ದು, ಕಾರಣ ಗೊತ್ತಾಗಿಲ್ಲ. ಬಜ್ಪೆ ಪೊಲೀಸರು ಕಾರ್ಯಾಚರಣೆಗೆ ಸಹಕರಿಸುತ್ತಿದ್ದಾರೆ.

By suddi9

Leave a Reply

Your email address will not be published. Required fields are marked *