ಬಂಟ್ವಾಳ: ಕರ್ನಾಟಕ ರಾಜ್ಯ 6ನೇ ವೇತನ ಆಯೋಗದ ವರದಿ ಅನುಷ್ಠಾನಕ್ಕಾಗಿ ಮತ್ತು ಶೆ. 30 ರಷ್ಟು ಮಧ್ಯಂತರ ಪರಿಹಾರ ಮಂಜೂರಾತಿಗಾಗಿ ಸರಕಾರವನ್ನು ಆಗ್ರಹಿಸಲು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು, ಜಿಲ್ಲೆ ಮತ್ತು ಕೇಂದ್ರ ಸಂಘದ ವತಿಯಿಂದ ಮುಖ್ಯಮಂತ್ರಿಯವರಿಗೆ ಹಾಗೂ ಸರಕಾರಕ್ಕೆ ರಾಜ್ಯಾದ್ಯಾಂತ ಮನವಿ ಸಲ್ಲಿಸುವ ಕಾರ್ಯಕ್ರಮ ಅ. 25 ರಂದು ನಡೆಯಲಿದೆ.
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ವತಿಯಿಂದ ಮಧ್ಯಾಹ್ನ ಗಂಟೆ 1.30 ಕ್ಕೆ ಬಂಟ್ವಾಳ ತಾಲೂಕು ಕಛೇರಿಯ ಪ್ರವೇಶ ದ್ವಾರದಲ್ಲಿ ನಡೆಯಲಿರುವ ಸಭೆಯಲ್ಲಿ ತಾಲೂಕು ಶಾಖೆಯ ಪದಾಧಿಕಾರಿಗಳು ಹಾಗೂ ಸಂಘದ ಸದಸ್ಯರು ಬೇಡಿಕೆಗಳ ಬಗ್ಗೆ ಒತ್ತಾಯಿಸಲಿದ್ದು , ಈ ಕುರಿತು ಮನವಿಯನ್ನು ತಹಶೀಲ್ದಾರರ ಮುಖಾಂತರ ಸರಕಾರಕ್ಕೆ ನೀಡಲಾಗುವುದು ಎಂದು ಸಂಘದ ತಾಲೂಕು ಅದ್ಯಕ್ಷ ಉಮಾನಾಥ ರೈ ಮೇರಾವು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
