ಬಂಟ್ವಾಳ :ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ ಮತ್ತು ತಾಲೂಕು ಬಾಲಭವನ ಸಮಿತಿ ಬಂಟ್ವಾಳ ಇದರ ಸಂಯುಕ್ತ ಆಶ್ರಯದಲ್ಲಿ ೩೦೧೭ ನೇ ಸಾಲಿನ ತಾಲೂಕು ಮಟ್ಟದ ಕಲಾಶ್ರೀ ಪ್ರಶಸ್ತಿ ಶಿಬಿರ ಬಿಸಿರೊಡಿನ ಸ್ತ್ರಿ ಶಕ್ತಿ ಭವನದಲ್ಲಿ ನಡೆಯಿತು. ಕಾರ್ಯಕ್ರಮ ವನ್ನು ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ ಉದ್ಘಾಟಿಸಿದರು.IMG_4929

ಬಳಿಕ ಮಾತನಾಡಿ ವಿದ್ಯಾರ್ಥಿಗಳು ಕೇವಲ ಪ್ರಶಸ್ತಿಯ ಹಿಂದೆ ಹೋಗದೆ ಸ್ಪರ್ಧೆಯಲ್ಲಿ ಭಾಗವಹಿಸುವ ಪರಿಪಾಟ ಬೆಳೆಸಿಕೊಳ್ಳಿ ಎಂದರು. ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಮಾತನಾಢಿ ಮಕ್ಕಳ ಪ್ರತಿಭೆಯನ್ನು ಪ್ರದರ್ಶಿಸಿಸಲು ಇಂತಹ ವೇದಿಕೆಗಳು ಸಹಕಾರಿಯಾಗುತ್ತದೆ. ವಿದ್ಯಾರ್ಥಿಗಳು ಶಿಸ್ತಿನ ಜೀವನ ನಡೆಸಿ ಎಂದು ತಿಳಿಸಿದರು.

ವೇದಿಕೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷೀ ಸಿ ಬಂಗೇರ. ಶಿಕ್ಷಕರಾದ ರಾಮಚಂದ್ರ ರಾವ್ , ಚೆನ್ನಕೇಶವ , ಜಯಂತಿ , ವಿಠಲ ನಾಯ್ಕ , ಪತ್ರಕರ್ತರಾದ ಗೋಪಾಲ ಅಂಚನ್, ಸಂದೀಪ್ ಸಾಲಿಯಾನ್, ಶಿಶು ಯೋಜನಾಧಿಕಾರಿ ಸುಧಾ ಜೋಶಿ ಸ್ವಾಗತಿಸಿ ಪ್ರಸ್ತಾವಿಸಿದ ರು. ಹಿರಿಯ ಮೇಲ್ವಿಚಾರಕಿ ಗಾಯತ್ರಿ ಕಂಬಳಿ ವಂದಿಸಿದರು.ಹಿರಿಯ ಮೇಲ್ವಿಚಾರಕಿ ಬಿ.ಭಾರತಿ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *