ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರನ ದರ್ಶನ ಪಡೆದು ಉಜಿರೆ ರತ್ನವರ್ಮ ಕ್ರೀಡಾಂಗಣದಲ್ಲಿ ಧರ್ಮಸ್ಥಳದ ಗ್ರಾಮಾಭಿವೃಧ್ಧಿ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಅವರು ಭಾಗವಹಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಫಲಾನುಭವಿಗಳಿಗೆ ‘ರೂಪೆ ಕಾರ್ಡ್’ ವಿತರಿಸಿದರು.
ನಂತರ ನಮೋ ಮಂಜುನಾಥ ಎಂದು ಕನ್ನಡದಲ್ಲಿ ಮಾತು ಆರಂಭಿಸಿದ ಪ್ರಧಾನಿ ಮೋದಿ, ಕಳೆದ ವಾರ ಆದಿ ಶಂಕರಾಚಾರ್ಯರು ಸ್ಥಾಪಿಸಿದ ಕೇದಾರನಾಥಕ್ಕೆ ಭೇಟಿ ನೀಡಿದ್ದೆ. ಇಂದು ದಕ್ಷಿಣದ ಮಂಜುನಾಥನ ದರ್ಶನ ಮಾಡುವ ಅವಕಾಶ ಸಿಕ್ಕಿದೆ. ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ನಾನು ಹಲವು ಬಾರಿ ಭೇಟಿ ಮಾಡಿದ್ದೇನೆ ಅವರ ಮುಖದಲ್ಲಿನ ನಗು ಹಾಗೆಯೇ ಇದೆ. ಒಂದು ಧಾರ್ಮಿಕ ಕ್ಷೇತ್ರ ಹೇಗಿರಬೇಕು? ಎಂಬುದಕ್ಕೆ ಧರ್ಮಸ್ಥಳ ಮಾದರಿಯಾಗಿದೆ ಎಂದರು.
ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಕ್ಕೆ ಹೆಗ್ಗಡೆಯವರು ಪ್ರೇರಣೆ. ಅವರ ತತ್ವವನ್ನು ಅಳವಡಿಕೆ ಮಾಡಲಾಗಿದೆ. ಧರ್ಮಸ್ಥದಳದಿಂದ ಸಾಕಷ್ಟು ಆಂದೋನವಾಗಿದೆ ಎಂದರು. 21ನೇ ಶತಮಾನದಲ್ಲಿ ಕೌಶಲಾಭಿವೃದ್ಧಿ ಬಗ್ಗೆ ಚರ್ಚೆಯಾಗುತ್ತದೆ. ರಾಷ್ಟ್ರವನ್ನು ಡಿಜಿಟಲ್ ಮಾಡುವತ್ತ ಹೆಜ್ಜೆ ಇಡಲಾಗುತ್ತಿದೆ ಎಂದರು.

