ವಿಟ್ಲ :ಲಯನ್ಸ್, ಲಯನೆಸ್ ಮತ್ತು ಲಿಯೋ ಕ್ಲಬ್ ವಿಟ್ಲ, ಲಯನ್ಸ್ ಸೇವಾ ಟ್ರಸ್ಟ್ ವಿಟ್ಲ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ವಿಟ್ಲ ಇವರ ಸಂಯುಕ್ತ ಆಶ್ರಯದಲ್ಲಿ ಯೇನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ ದೇರಳಕಟ್ಟೆ ಇದರ ಸಹಯೋಗಲ್ಲಿ, ವಿಟ್ಲದ ವಿಠಲ ಪ್ರೌಢ ಶಾಲೆಯಲ್ಲಿ ವಿಶೇಷ ಅಗತ್ಯವುಳ್ಳ ಮಕ್ಕಳ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ನಡೆಯಿತು.
ಈ ಕಾರ್ಯಕ್ರಮವನ್ನು ಲಯನ್ಸ್ ಸೇವಾ ಟ್ರಸ್ಟ್ನ ಅಧ್ಯಕ್ಷ ಸತೀಶ್ ಕುಮಾರ್ ಆಳ್ವ ಉದ್ಘಾಟಿಸಿದರು. ವಿಟ್ಲ ಸುರಕ್ಷಾ ಹೆಲ್ತ್ ಸೆಂಟರಿನ ಡಾ| ಗೀತಪ್ರಕಾಶ್, ಯೇನೆಪೋಯ ಫಿಸಿಯೋ ತೆರಪಿ ವಿಭಾಗದ ಪ್ರಾಂಶುಪಾಲ ಡಾ| ಪ್ರಸಾದ್, ವಿಠಲ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್, ಶಿಶು ಅಭಿವೃದ್ಧಿ ಅಧಿಕಾರಿ ಸುಧಾ ಜೋಷಿ, ಲಯನ್ ವಲಯಾಧ್ಯಕ್ಷ ಸುದರ್ಶನ ಪಡಿಯಾರ್, ಲಯನೆಸ್ ಅಧ್ಯಕ್ಷೆ ಭಾರತಿ ಪ್ರಕಾಶ್ ಉಪಸ್ಥಿತರಿದ್ದರು. ಲಯನ್ಸ್ ಕ್ಲಬ್ ಅಧ್ಯಕ್ಷೆ ವಿನ್ನಿ ಮಸ್ಕರೇನಸ್ ಸ್ವಾಗತಿಸಿದರು. ಕ್ಷೇತ್ರ ಸಂಪನ್ಮೂಲ ಅಧಿಕಾರಿ ಪ್ರದೀಪ್ ವಂದಿಸಿದರು. ಸರ್ವಶಿಕ್ಷಣ ಅಭಿಯಾನದ ಬಾಬು ನಾಯ್ಕ ಕಾರ್ಯಕ್ರಮ ನಿರೂಪಿಸಿದರು. ಸುಮಾರು 500 ಕ್ಕೂ ಹೆಚ್ಚು ಮಂದಿ ಶಿಬಿರದ ಪ್ರಯೋಜನೆ ಪಡೆದರು.
