ಬೆಂಗಳೂರು: ಕೆಪಿಎಸ್‌ಸಿ ನೇಮಕಾತಿಯನ್ನು ರದ್ದುಗೊಳಿಸಿದ ಸರ್ಕಾರದ ಕ್ರಮವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಅಭ್ಯರ್ಥಿಗಳು ಸಿಎಂ ಆಗಮನಕ್ಕೆ ಪಟ್ಟು ಹಿಡಿದಿದ್ದಾರೆ. ಕಳೆದ 20 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಅಭ್ಯರ್ಥಿಗಳು, ಸರ್ಕಾರ ತನ್ನ ಆದೇಶವನ್ನು ಹಿಂಪಡೆಯುವವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ. ಸಿಎಂ ಸಿದ್ದಾರಾಮಯ್ಯ ಅವರು ಪ್ರತಿಭಟನೆ ಸ್ಥಳಕ್ಕೆ ಆಗಮಿಸಬೇಕು ಎಂದು ಆಗ್ರಹಿಸಿರುವ ಅಭ್ಯರ್ಥಿಗಳು, ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಕೈ ಬಿಡುವುದಿಲ್ಲ, ನಮಗೆ ನ್ಯಾಯಾ ಬೇಕು ಎಂದು ಘೋಷಣೆ ಕೂಗುತ್ತಿದ್ದಾರೆ. ಫ್ರೀಡಂ ಪಾಕ್‌ನಲ್ಲಿ ನೊಂದ ಅಭ್ಯರ್ಥಿಗಳು ಕಣ್ಣೀರಿಡುತ್ತಾ, ಸರ್ಕಾರ ತನ್ನ ಆದೇಶ ಹಿಂಪಡೆಯುವವರೆಗೂ ಹೋರಾಟ ನಡೆಸುತ್ತೇವೆ ಎಂದು ಅಭ್ಯರ್ಥಿಗಳು ಹೇಳಿದ್ದಾರೆ.
