ಬಂಟ್ವಾಳ:ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಟ್ರೀ ಪಾಕರ್್ ಸಮೀಪದ ಮೈದಾನದಲ್ಲಿ ಇದೇ 11ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿರುವ ಬೃಹತ್ ‘ಬಿಜೆಪಿ ಪರಿವರ್ತನಾ ರ್ಯಾಲಿ’ ಸಮಾವೇಶದಲ್ಲಿ ತಾಲ್ಲೂಕಿನ ಒಟ್ಟು 240 ಮತಗಟ್ಟೆಗಳಿಂದಲೂ ತಲಾ 100 ಮಂದಿ ಭಾಗವಹಿಸಲು ಪಕ್ಷದ ಕಾರ್ಯಕರ್ತರಿಗೆ ಸೂಚಿಸಲಾಗಿದೆ ಎಂದು ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ ತಿಳಿಸಿದ್ದಾರೆ.
ತಾಲ್ಲೂಕಿನ ಬಿ.ಸಿ.ರೋಡ್ ಬಿಜೆಪಿ ಕಚೇರಿಯಲ್ಲಿ ಬುಧವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅಂದು ಬೆಳಿಗ್ಗೆ 9 ಗಂಟೆಗೆ ವಿವಿಧ ವಾಹನಗಳ ಮೂಲಕ ಪುಂಜಾಲಕಟ್ಟೆಯಲ್ಲಿ ಯಾತ್ರೆಯನ್ನು ಎದುರುಗೊಂಡು ಬಳಿಕ ಬಿ.ಸಿ.ರೋಡ್ನಲ್ಲಿ ಸಮಾವೆಶ ನಡೆಯಲಿದೆ ಎಂದರು. ಈಗಾಗಲೇ ಕಾರ್ಯಕ್ರಮದ ಯಶಸ್ವಿಗೆ ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರ ವಿವಿಧ ಸಮಿತಿ ರಚಿಸಲಾಗಿದೆ. ವಿಶಾಲವಾದ ಮೈದಾನದಲ್ಲಿ ಚಪ್ಪರ, ವೇದಿಕೆ ನಿರ್ಮಾಣ ಮತ್ತು ಭೋಜನಾಲಯ ನಿರ್ಮಾಣ ಕಾರ್ಯ ಭರದಿಂದ ನಡೆಯುತ್ತಿದೆ. ತಾಲ್ಲೂಕಿನಾದ್ಯಂತ ನಗರ ಪ್ರದೇಶಗಳಲ್ಲಿ ಬಿಜೆಪಿ ಬಾವುಟ ಮತ್ತು ಬಂಟಿಂಗ್ಸ್ ಸಹಿತ ಫ್ಲೆಕ್ಸ್ ಅಳವಡಿಸಲಾಗುತ್ತಿದೆ ಎಂದು ವಿವರಿಸಿದರು.
ಈ ಸಮಾವೇಶವು ಜಿಲ್ಲೆಯ ವಿವಿಧೆಡೆ ನಡೆಯಲಿದ್ದು, ಇಲ್ಲಿಯೂ ಹಲವಾರು ಮಂದಿ ಬಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದರು.ಸುದ್ದಿಗೋಷ್ಠಿಯಲ್ಲಿ ಬಿಜಪಿ ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯ್ಕ್, ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಜಿಲ್ಲಾ ಉಪಾಧ್ಯಕ್ಷ ಜಿ.ಆನಂದ, ಪ್ರಮುಖರಾದ ಸುಲೋಚನಾ ಜಿ.ಕೆ.ಭಟ್, ರಾಮದಾಸ ಬಂಟ್ವಾಳ, ಮೋನಪ್ಪ ದೇವಸ್ಯ, ದಿನೇಶ್ ಅಮ್ಟೂರು, ಬಿ.ದಿನೇಶ್ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.
