ಸಿದ್ಧಕಟ್ಟೆ: ಬಂಟ್ವಾಳ ತಾಲೂಕು ಸಿದ್ಧಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಶಾಲಾ ವಾರ್ಷಿಕ ಕ್ರೀಡಾಕೂಟ ನಡೆಯಿತು. ಬಂಟ್ವಾಳ ರೋಟರಿ ಕ್ಲಬ್‍ನ ಅಧ್ಯಕ್ಷ ಸಂಜೀವ ಪೂಜಾರಿ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿದರು.21PN Siddakatte

ಸಂಗಬೆಟ್ಟು ಗ್ರಾ.ಪಂ. ಉಪಾಧ್ಯಕ್ಷ ಸತೀಶ್ ಪೂಜಾರಿ, ಸದಸ್ಯ ಮಾಧವ ಶೆಟ್ಟಿಗಾರ್, ತಾ.ಪಂ. ಸದಸ್ಯ ಪ್ರಭಾಕರ ಪ್ರಭು, ತಾ.ಪಂ.ಮಾಜಿ ಸದಸ್ಯ ಅರ್ಕಕೀರ್ತಿ ಇಂದ್ರ, ಬಂಟ್ವಾಳ ರೋಟರಿ ಕ್ಲಬ್ ಕಾರ್ಯದರ್ಶಿ ನಾರಾಯಣ ಹೆಗ್ಡೆ, ಸಿದ್ಧಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಶ್ರೀನಿವಾಸ ನಾಯ್ಕ್, ಸಿದ್ಧಕಟ್ಟೆ ಸರಕಾರಿ ಪ್ರೌಢಶಾಲೆಯ ಉಪಪ್ರಾಂಶುಪಾಲ ರಮಾನಂದ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸೀತಾರಾಮ ಶಾಂತಿ ಕೆ., ಸದಸ್ಯರಾದ ಕೇಶವ ಶೆಟ್ಟಿ, ಮಂದಾರತಿ ಎಸ್. ಶೆಟ್ಟಿ, ಸ್ಟೆಲ್ಲಾ ಕುವೆಲ್ಲೋ ಮತ್ತಿತರರು ಇದ್ದರು. ಶಿಕ್ಷಕ ಮಹೇಶ್ ಕುಮಾರ್ ವಿ. ಕರ್ಕೇರ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ವಾಸು ವಂದಿಸಿದರು. ಹಿರಿಯ ಶಿಕ್ಷಕಿ ಮಾರ್ಗರೀಟಾ ಪಿಂಟೋ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *