ವಿಟ್ಲ: ವಿಟ್ಲದ ವಿಠಲ ವಿದ್ಯಾ ಸಂಘದ ಪ್ರೌಢ ಶಾಲಾ ವಿಭಾಗದ ವಾರ್ಷಿಕೋತ್ಸವವು ವಿಠಲ ಪದವಿ ಪೂರ್ವ ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ನಡೆಯಿತು. ಬೆಂಗಳೂರು ಜೆ ಎಂ ಸು ಪ್ರಾಜೆಕ್ಟ್ಸ್ ಇಂಡಿಯಾ ಲಿಮಿಟೆಡ್‍ನ ಪ್ರಾಜೆಕ್ಟ್ಸ್ ವಿಭಾಗದ ಉಪಾಧ್ಯಕ್ಷ ಚಿದಾನಂದ ಕಾಮತ್ ಸಿ ಹೆಚ್ ಈ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿದ್ದರು.2 (1)

2 (3)

2 (5)

ಮಂಗಳೂರು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಆಹಾರ ನಿರೀಕ್ಷಕಿ ರಾಜಶ್ರೀ ಅಡ್ಯಂತಾಯ ಬಿ ಎಂ.ಎಸ್ಸಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ವಿಠಲ ವಿದ್ಯಾ ಸಂಘದ ಸಂಚಾಲಕ ಎಲ್ ಎನ್ ಕೂಡೂರು, ಕಾರ್ಯದರ್ಶಿ ಯಶವಂತ ವಿಟ್ಲ, ಕೋಶಾಧಿಕಾರಿ ನಿತ್ಯಾನಂದ ನಾಯಕ್, ಐಟಿಐ ಪ್ರಾಂಶುಪಾಲ ರಘೂರಾಮ ಶಾಸ್ತ್ರಿ, ವಿಠಲ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಆದರ್ಶ ಚೊಕ್ಕಾಡಿ, ವಿಠಲ ಪ್ರೌಢಶಾಲಾ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್ ಹಾಗೂ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ವೇದಿಕೆಯಲ್ಲಿದ್ದರು. ಈ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿಳಿಂದ ವಿವಿಧ ಸಾಂಸ್ಕ್ರತಿಕ  ಕಾರ್ಯಕ್ರಮ ನಡೆಯಿತು.

By suddi9

Leave a Reply

Your email address will not be published. Required fields are marked *