33ಮಂಗಳೂರು: ಬಂಟ್ವಾಳ ತಾಲೂಕಿನಲ್ಲಿ ಕೆಲವು ತಿಂಗಳ ಹಿಂದೆಯಷ್ಟೇ ದುಷ್ಕರ್ಮಿಗಳಿಂದ ಹತ್ಯೆಯಾದ ಶರತ್ ಮಡಿವಾಳ ಹಾಗೂ ಕಳಾಯಿ ಅಶ್ರಫ್ ಅವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ರಾಜ್ಯ ಸರಕಾರ ಬಿಡುಗಡೆ ಮಾಡಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ. ಖಾದರ್ ಮಾಹಿತಿ ನೀಡಿದ್ದಾರೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕುಟುಂಬಗಳಿಗೆ ರಾಜ್ಯ ಸರಕಾರ ನೀಡುವ ಪರಿಹಾರದ ಮೊತ್ತವನ್ನು ಜಿಲ್ಲಾ ಉಸ್ತುವಾರಿ ರಮಾನಥ ರೈ ವಿತರಿಸಲಿದ್ದಾರೆ ಎಂದು ಹೇಳಿದರು.

ಈ ಇಬ್ಬರು ಅಮಾಯಕರ ಕೊಲೆ ನಡೆದ ಸಂದರ್ಭದಲ್ಲಿ ತಾನು ಸುದ್ದಿಗೋಷ್ಠಿ ನಡೆಸಿ ಈ ಎರಡು ಕುಟುಂಗಳಿಗೆ ಪರಿಹಾರದ ಹಣ ನೀಡುತ್ತೇನೆಂದು ಭರವಸೆ ನೀಡಿದ್ದೆ, ಅದರಂತೆ ನಾನು ರಾಜ್ಯದ ಮುಖ್ಯಮಂತ್ರಿ ಜತೆ ಸಮಾಲೋಚನೆ ನಡೆಸಿ ಈ ಕುಟುಂಬಗಳಿಗೆ ಸರಕಾರದ ಪರಿಹಾರ ಹಣ ಬಿಡುಗಡೆಗೊಳಿಸಿ ಮಾತು ಉಳಿಸಿದ್ದೇನೆ ಎಂದರು.

By suddi9

Leave a Reply

Your email address will not be published. Required fields are marked *