7474ಯಾದಗಿರಿ: ನಗರದಲ್ಲಿ ಇತ್ತೀಚೆಗೆ ಶ್ರೀರಾಮಸೇನೆ ಆಯೋಜಿಸಿದ್ದ ವಿರಾಟ್‌ ಹಿಂದೂ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಶ್ರೀರಾಮಸೇನೆಯ ಮುಖಂಡರ ಮೇಲೆ ನಗರ ಠಾಣೆಯ ಪೊಲೀಸರು ಶುಕ್ರವಾರ ಸ್ವಯಂ ಪ್ರಕರಣ ದಾಖಲಿಸಿದ್ದಾರೆ.

ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರಮಠದ ಸಿದ್ದಲಿಂಗ ಸ್ವಾಮೀಜಿ, ಶ್ರೀರಾಮಸೇನೆ ಹೈದರಾಬಾದ್‌ ಕರ್ನಾಟದ ಘಟಕ ಅಧ್ಯಕ್ಷ ವಿಜಯ ಪಾಟೀಲ್ ಹಾಗೂ ತೆಲಂಗಾಣದ ಗೋಶಾಮಹಲ್ ಕ್ಷೇತ್ರದ ಶಾಸಕ ರಾಜಾಸಿಂಗ್ ಠಾಕೂರ್ ಅವರ ಮೇಲೆ ಪ್ರಕರಣ ದಾಖಲಾಗಿದೆ.

“ವಿರಾಟ್‌ ಹಿಂದೂ ಸಮಾವೇಶದಲ್ಲಿ ಶ್ರೀರಾಮಸೇನೆಯ ಮುಖಂಡರು ಗಲಭೆಗೆ ಪ್ರಚೋದನೆ ನೀಡುವಂತಹ ಭಾಷಣ ಮಾಡಿದ್ದು, ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗುವುದು” ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್‌ ಮಾಹಿತಿ ನೀಡಿದ್ದಾರೆ.

ಏನಿದು ಘಟನೆ: ಡಿ.12ರಂದು ನಗರದ  ವನಿಕೇರಿ ಮೈದಾನದಲ್ಲಿ ನಡೆದ ವಿರಾಟ್‌ ಹಿಂದೂ ಸಮಾವೇಶದಲ್ಲಿ ತೆಲಂಗಾಣದ ಗೋಶಾಮಹಲ್ ಕ್ಷೇತ್ರದ ಶಾಸಕ ರಾಜಾಸಿಂಗ್ ಠಾಕೂರ್ ಪ್ರಧಾನ ಭಾಷಣ ಮಾಡಿದ್ದರು. ಅವರೊಂದಿಗೆ ಆಂದೋಲಾ ಕರುಣೇಶ್ವರ ಮಠದ ಸಿದ್ಧಲಿಂಗ ಸ್ವಾಮೀಜಿ, ಪ್ರಮೋದ ಮುತಾಲಿಕ್, ವಿಜಯ ಪಾಟೀಲ ಗಲಭೆಗೆ ಪ್ರಚೋದನೆ ನೀಡುವಂತಹ ಹೇಳಿಕೆ ನೀಡಿದ್ದಾರೆಂದು ದಾಖಲಿಸಿರುವ ದೂರಿನಲ್ಲಿ ಪೊಲೀಸರು ಆರೋಪಿಸಿದ್ದಾರೆ.

By Suddi9

Leave a Reply

Your email address will not be published. Required fields are marked *